ಇದಕ್ಕೂ ಮೊದಲು ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ಸರ್ವಾಂಗೀಣ ಅಭಿವೃದ್ಧಿಗೆ ಈಗಾಗಲೇ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹಳೆ ಜೈಲು ಆವರಣದಲ್ಲಿ ಉದ್ಯಾನವನ ಸೇರಿದಂತೆ ನಾಗರಿಕ ಸೌಲಭ್ಯಗಳನ್ನು ಕಲ್ಪಿಸುವ ನೀಲ ನಕಾಶೆಯನ್ನು ಅಧಿಕಾರಿಗಳು ಈಗಾಗಲೇ ಸಲ್ಲಿಸಿದ್ದಾರೆ. ಇದಕ್ಕೆ ಅಗತ್ಯ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಒಂದು ವರ್ಷದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭಿಸಲು ಯೋಜನೆ ರೂಪಿಸಲಾಗಿದ್ದು, ಈಗಾಗಲೇ 39ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ವರ್ತುಲ ರಸ್ತೆ ನಿರ್ಮಾಣ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.