“ ವಿದ್ಯುತ್ ಮೋಟಾರ್ ರೀವೈಂಡಿಂಗ್ ಮತ್ತು ಪಂಪ್‍ಸೆಟ್ ದುರಸ್ತಿ ” ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ನಿರುದ್ಯೋಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಗಳು:
1) ಕುರಿ ಸಾಕಾಣಿಕೆ – (10 ದಿನಗಳು)
2) ಪೇಪರ್ ಬ್ಯಾಗ್, ಕವರ್ , ಎನ್ವಲಪ್ ಮತ್ತು
ಫೈಲ್ ತಯಾರಿಸುವುದು – (10 ದಿನಗಳು) [
3) ವಿದ್ಯುತ್ ಮೋಟಾರ್ ರೀವೈಂಡಿಂಗ್ ಮತ್ತು ಪಂಪ್ ಸೆಟ್ ದುರಸ್ತಿ – (30)
4) ರೆಫ್ರಿಜೆರೇಟರ್ ಮತ್ತು ಏರ್ ಕಂಡೀಷನರ್ ರಿಪೇರಿ – (30)
ತರಬೇತಿಯು ನವೆಂಬರ್ – 2019 ರಲ್ಲಿ ಪ್ರಾರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-577 216 (ಶಿವಮೊಗ್ಗ ತಾಲ್ಲೂಕು)
ಇವರಿಗೆ ಕೂಡಲೇ / ತಕ್ಷಣವೇ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9481955721, 9590601990
9743429595, 9449371579, 9538271653,

ಅಥವಾ ದೂರವಾಣಿ ನಂ: 08182-245721,
ಸಂಪರ್ಕಿಸಿ.

error: Content is protected !!