ಶಿವಮೊಗ್ಗ, ಜನವರಿ 17: ದಿನದ 24 ಗಂಟೆಗಳ ಕಾಲ ಕೆಲಸದ ಒತ್ತಡದಲ್ಲೇ ಇರುವ ಸರ್ಕಾರಿ ನೌಕರರಿಗೆ ಇಂತಹ ಕ್ರೀಡೆಯು ಮನೋಲ್ಲಾಸ ನೀಡಲಿದೆ ಎಂದು ವಿಧಾನ ಪರಿಷತ್ ಶಾಸಕ ಆರ್. ಪ್ರಸ್ನನ ಕುಮಾರ್ ಹೇಳಿದರು.
ಇಂದು ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರುಗಳ ಸಂಯುಕ್ತಾಶ್ರದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳ ಕಾರ್ಯಕ್ರಮದ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು.
ಕ್ರೀಡೆ ಎಂಬುವುದು ಮನುಷ್ಯನ ಕ್ರೀಯಾಶೀಲತೆಯನ್ನು ಹೆಚ್ಚಿಸುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲವು ಎರಡನ್ನೂ ಸಮನಾಗಿ ಸ್ವೀಕರಿಸಬೇಕು. ಅದಕ್ಕಿಂತ ಮುಖ್ಯವಾಗಿ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯವಾಗಿರುತ್ತದೆ ಎಂದರು.
ಆರೋಗ್ಯವಂತನಾಗಿರಲು ಕ್ರೀಡೆಯು ಮುಖ್ಯವಾಗಿರುತ್ತದೆ. ಕ್ರೀಡೆ ಆಡುವುದರಿಂದ ಉತ್ತಮವಾದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾತಾನಾಡಿ, ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಕ್ರೀಡೆಯು ಉತ್ಸಾಹವನ್ನು ತುಂಬಲಿದೆ. ಕ್ರೀಡೆಯಲ್ಲಿ ಭಾಗವಹಿಸುವಾಗ ಎಲ್ಲರೂ ಸ್ಪರ್ಧಾಗಳುಗಳಂತೆ ಕ್ರೀಡಾ ನಿಯಮ ಪಾಲಿಸಬೇಕು ಎಂದು ಸೂಚನೆ ನೀಡಿದರು.
ಸರ್ಕಾರಿ ನೌಕರರಿಗೆ ಅನುಕೂಲವಂತೆ ಕ್ಯಾಂಟೀನ್ನ್ನು ಲೋಕಾರ್ಪಣೆ ಮಾಡಲಾಗಿದೆ. ರಾಜೇಂದ್ರ ನಗರದ ನೂರಡಿ ರಸ್ತೆಯಲ್ಲಿರುವ ಕಂದಾಯ ಭವನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘವು ಸಾಯಿ ಇಂಟರ್ ನ್ಯಾಷನಲ್ ಸಂಸ್ಧೆಯ ಸಹಯೋಗದೊಂದಿಗೆ ರಾಜ್ಯ ಸರ್ಕಾರಿ ನೌಕರರಿಗಾಗಿ ಅತ್ಯಂತ ರಿಯಾಯಿತಿ ದರದಲ್ಲಿ ದಿನಉಪಯೋಗಿ ವಸ್ತುಗಳ ಕ್ಯಾಂಟೀನ್ನ್ನು ನಿರ್ಮಾಣ ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮಾತಾನಾಡಿ, ಜೀವನದಲ್ಲಿ ಕೆಲಸದ ಒತ್ತಡ ಹೆಚ್ಚಾಗಿದ್ದು. ಕ್ರೀಡೆಯಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ ಎಂದರು.
ಸಕಾರಿ ನೌಕರರು ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ಆರೋಗ್ಯ ಉತ್ತಮಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಮಾತನಾಡಿ, ಕ್ರೀಡೆ ಮನೋಭಾವವನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು. ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ಆರೋಗ್ಯ ನಿರ್ವಹಣೆ ಮಾಡಿಕೊಳ್ಳಬೇಕು ಆಗ ಆರೋಗ್ಯ ಚೆನ್ನಾಗಿರುತ್ತದೆ. ಕ್ರೀಡೆಯು ಒತ್ತಡವನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಎಂ.ಟಿ. ಮಂಜುನಾಥಸ್ವಾಮಿ, ಜಿಲ್ಲಾ ಪಂಚಾಯತ್ ಉಪಾಧ್ಯಾಕ್ಷರು ವೇದ ವಿಜಯ ಕುಮಾರ್, ಅಪರ ಜಿಲ್ಲಾಧಿಕಾರಿ ಅನುರಾಧ, ತಾಲ್ಲೂಕು ಅಧ್ಯಕ್ಷರುಗಳಾದ ಐ.ಪಿ. ಶಾಂತರಾಜ್, ಆರ್. ಮೋಹನ್ ಕುಮಾರ್, ಎಸ್.ವೈ. ರಮೇಶ್, ಹೆಚ್.ಎನ್. ರಾಘು, ಡಿ.ಟಿ. ಕೃಷ್ಣಮೂರ್ತಿ ಮತ್ತು ಆರ್. ಪಾಪಣ್ಣ ಸೇರಿದಂತೆ ಗಣ್ಯರು ಮತ್ತು ಸರ್ಕಾರಿ ನೌಕರರ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.