ಶಿವಮೊಗ್ಗ ಜಿಲ್ಲೆ ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಗೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಮಂಜೂರು ಆಗಿದೆ. ಮೂರು ವರ್ಷದಲ್ಲಿ ಹಲವು ಅಭಿವೃದ್ಧಿ ಕಾಮಗಾರಿ ಪೂರ್ಣಗೊಳ್ಳಲಿದೆ. ಜಿಲ್ಲೆಯಲ್ಲಿ ಕೈಗಾರಿಕಾ ಕೇಂದ್ರಗಳು ಬರಬೇಕು, ನಿರುದ್ಯೋಗಿಗಳಿಗೆ ಉದ್ಯೋಗ ಹೆಚ್ಚಿಸಬೇಕು ಎಂದರೆ. ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಆಗಲೇಬೇಕು ಈ ದೃಷ್ಟಿಯಿಂದ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದೆ. ಎಂದು ಮಾನ್ಯ ಮುಖ್ಯಮಂತ್ರಿ ಶ್ರೀ ಬಿಎಸ್ ಯಡಿಯೂರಪ್ಪನವರು ಇಂದು ಸಂಜೆ ಶಿವಮೊಗ್ಗ ಹೆಲಿಪ್ಯಾಡ್ ಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ. ಬಜೆಟ್ ಸಿದ್ಧತೆ ಗೆ ಪೂರ್ವಭಾವಿ ಸಿದ್ಧತೆಗಳು ಬರದಿಂದ ಸಾಗಿದ್ದು ಹಣಕಾಸಿನ ಇತಿಮಿತಿಯಲ್ಲಿ ನೀರಾವರಿಗೆ. ಕೃಷಿಗೆ ಹೆಚ್ಚಿನ. ಆದ್ಯತೆಯನ್ನು ನೀಡಲಾಗುವುದು. ಎಂದರು

ಸೋಮವಾರ ಬೆಳಗ್ಗೆ 10.30ಕ್ಕೆ ಶಿವಮೊಗ್ಗದಲ್ಲಿ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ, ನಂತರ ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗುವುದು, ತದನಂತರ ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನೀರಾವರಿ, ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿ. ನಂತರ ಮಧ್ಯಾಹ್ನ 3.45 ಕ್ಕೆ ಶಿಕಾರಿಪುರದಲ್ಲಿ ನೀರಾವರಿ ಸೇರಿದಂತೆ ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಾಗುವುದು ಎಂದರು.
ಮಂಗಳವಾರ ಬೆಳಿಗ್ಗೆ 9ಗಂಟೆಗೆ ಬೆಂಗಳೂರಿಗೆ ತೆರಳಲಿದ್ದೇನೆ ಎಂದರು,

ಈ ಸಂದರ್ಭದಲ್ಲಿ ಸಂಸದರಾದ ಶ್ರೀ ಬಿವೈ ರಾಘವೇಂದ್ರ, ವಿಧಾನಪರಿಷತ್ ಶಾಸಕರಾದ ಶ್ರೀ ಎಸ್ ರುದ್ರೇಗೌಡ,ರಾಜ್ಯ ಆರ್ಯ ವೈಶ್ಯ ನಿಗಮದ ಅಧ್ಯಕ್ಷ ಶ್ರೀ ಡಿಎಸ್ ಅರುಣ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಶ್ರೀ ಟಿ ಡಿ ಮೇಘರಾಜ್, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀ ಎಸ್ ದತ್ತಾತ್ರಿ, ಪಾಲಿಕೆ ಆಡಳಿತ ಪಕ್ಷದ ನಾಯಕರಾದ ಶ್ರೀ ಚನ್ನಬಸಪ್ಪ, ಸೇರಿದಂತೆ ಹಲವರು ಜೊತೆಯಲ್ಲಿದ್ದರು

error: Content is protected !!