ಶಿವಮೊಗ್ಗ, ಮಾರ್ಚ್ 03 : ಪ್ರೇರಣಾ ಸಂಸ್ಥೆಯು ಸ್ಥಳೀಯ ಸಂಘ-ಸಂಸ್ಥೆಗಳು ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನಾಚರಣೆ ಅಂಗವಾಗಿ ಫೆಬ್ರವರಿ 27ರಿಂದ 29ರವರೆಗೆ ಮೂರು ದಿನಗಳ ಕಾಲ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಏರ್ಪಡಿಸಲಾಗಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ 83,273ಕಾರ್ಡ್ ವಿತರಿಸಿ, ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆ ಫೆಬ್ರವರಿ ಮಾಹೆಯಲ್ಲಿ ಮೊದಲ ಸ್ಥಾನಕ್ಕೆ ಏರಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಅವಧಿಯಲ್ಲಿ ಶಿವಮೊಗ್ಗ ತಾಲೂಕಿನ 42ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 14,190, ಭದ್ರಾವತಿ ತಾಲೂಕಿನ 41ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 11,678, ತೀರ್ಥಹಳ್ಳಿ ತಾಲೂಕಿನ 38ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 8,781, ಸಾಗರ ತಾಲೂಕಿನ 34ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 8,079, ಸೊರಬ ತಾಲೂಕಿನ 41ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 11,139, ಶಿಕಾರಿಪುರ ತಾಲೂಕಿನ 44ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 13,978, ಹೊಸನಗರ ತಾಲೂಕಿನ 30ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 7,867 ಹಾಗೂ ಬೈಂದೂರು ಪ್ರದೇಶದ ವ್ಯಾಪ್ತಿಯಲ್ಲಿ 1,867 ಮತ್ತು ನಗರ ಮತ್ತು ಪಟ್ಟಣ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿ.ಹೆಚ್.ಸಿ. ಮೂಲಕ 6,048ಜನರಿಗೆ ಆರೋಗ್ಯ ಕಾರ್ಡ್‍ಗಳನ್ನು ವಿತರಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಶಯದ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯನ್ನು ಜನಸಾಮಾನ್ಯರ ಮನೆಮನೆಗೆ ತಲುಪಿಸುವ ನಿಟ್ಟಿನಲ್ಲಿ ಪ್ರೇರಣಾ ಟ್ರಸ್ಟ್ ಬೈಂದೂರು ಮತಕ್ಷೇತ್ರ ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆರೋಗ್ಯ ಕಾರ್ಡ್‍ಗಳ ವಿತರಣೆಗಾಗಿ ವಿಶೇಷ ಆಂದೋಲನವನ್ನು ಆಯೋಜಿಸಿತ್ತು. ಇದರಿಂದಾಗಿ 75,000ಕ್ಕೂ ಅಧಿಕ ಸಂಖ್ಯೆಯ ಜನರು ಆರೋಗ್ಯ ಕಾರ್ಡ್‍ನ್ನು ಪಡೆದುಕೊಂಡಿದ್ದರು. ಇದರಿಂದಾಗಿ ಈವರೆಗೆ ಒಟ್ಟು 1,58,273ಜನ ಕಾರ್ಡುಗಳನ್ನು ಪಡೆದುಕೊಂಡಂತಾಗಿದೆ ಎಂದವರು ತಿಳಿಸಿದ್ದಾರೆ.
ಈ ಯೋಜನೆ ಜನಸಾಮಾನ್ಯರಿಗೆ ತಲುಪಿಸುವಲ್ಲಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 313ಬಾಪೂಜಿ ಸೇವಾ ಕೇಂದ್ರಗಳು ಹಾಗೂ ನಗರ ಮತ್ತು ಪಟ್ಟಣ ಪ್ರದೇಶದ ವ್ಯಾಪ್ತಿಯಲ್ಲಿನ 19ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಹಕಾರ ಪ್ರಮುಖವಾಗಿದೆ ಎಂದು ತಿಳಿಸಿರುವ ಅವರು, ಯೋಜನೆಯ ವ್ಯವಸ್ಥಿತ ಅನುಷ್ಠಾನಕ್ಕೆ ಸಹಕರಿಸಿದ ವಿವಿಧ ಇಲಾಖೆಗಳ ಮುಖ್ಯಸ್ಥರು, ಸಿಬ್ಬಂಧಿ ವರ್ಗದವರು, ಜಿಲ್ಲಾ ಪಂಚಾಯಿತಿ ಅಧೀನಕ್ಕೊಳಪಟ್ಟ ಬಾಪೂಜಿ ಸೇವಾ ಕೇಂದ್ರದ ಸಿಬ್ಬಂಧಿ ವರ್ಗ, ಸಾಮಾನ್ಯ ಸೇವಾ ಕೇಂದ್ರದ ಸಿಬ್ಬಂಧಿಗಳು, ಆಶಾ ಕಾರ್ಯಕರ್ತೆಯರು ಅಭಿನಂದನಾರ್ಹರು ಎಂದವರು ತಿಳಿಸಿದ್ದಾರೆ.

error: Content is protected !!