ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ವಿಡಿಯೋ ಸಂದೇಶಗಳನ್ನು ಪ್ರಸಾರ ಹಾಗೂ ಫಾರ್ವರ್ಡ್ ಮಾಡುತ್ತಿದ್ದ ಎರಡು ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್, ವಾಟ್ಸಾಪ್ ಇನ್‍ಸ್ಟಾಗ್ರಾಂ ಮತ್ತಿತರ ಮಾಧ್ಯಮಗಳಲ್ಲಿ ಬೇರೆ ಧರ್ಮದ ವಿರುದ್ಧ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಸಂದೇಶಗಳನ್ನು ಪ್ರಸಾರ ಮಾಡಿದ ಹಾಗೂ ಫಾರ್ವರ್ಡ್ ಮಾಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗ ಸಿ.ಇ.ಎನ್. ಕ್ರೈಮ್ ಪೊಲೀಸ್ ಠಾಣೆಯಲ್ಲಿ ಕಲಂ 153, 505 (2), 153 ಅಡಿ ಒಟ್ಟು ನಾಲ್ಕು ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ಕ್ರಮ ವಹಿಸಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ಸಂದೇಶಗಳನ್ನು ಹಾಕುವವರ, ತಯಾರಿಸುವವರ, ಫಾರ್ವರ್ಡ್ ಮಾಡುವವರ, ಅಂತಹ ಗ್ರೂಪ್‍ಗಳ ಅಡ್ಮಿನ್‍ಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.