News Next

ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾ ವೈರಸ್ ಹರಡದಂತೆ ತಡೆಯುವ ಸಲುವಾಗಿ ಸಾರ್ವಜನಿಕ ಹಿತದೃಷ್ಠಿಯಿಂದ ಜಾರಿಗೊಳಿಸಲಾಗಿದ್ದ ಕಲಂ 144ನಿಷೇಧಾಜ್ಞೆಯನ್ನು ಮೇ-17 ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಮೇ.17 ರವರೆಗೆ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 188ರ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

error: Content is protected !!