ಶಿವಮೊಗ್ಗ : ಅಕ್ಟೋಬರ್ 27: ಶಿವಮೊಗ್ಗ ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ನ. 01 ರಂದು ಭಾನುವಾರ ಬೆಳಿಗ್ಗೆ 09.00ಕ್ಕೆ ನಗರದ ಡಿ.ಎ.ಆರ್.ಪೊಲೀಸ್ ಪೆರೇಡ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವನ್ನು ರಾಜ್ಯದ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪರವರ ಉಪಸ್ಥಿತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪರವರ ಧ್ವಜಾರೋಹಣ ಮಾಡುವರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅದ್ಯಕ್ಷೆ ಶ್ರೀಮತಿ ಜ್ಯೋತಿ ಎಸ್. ಕುಮಾರ್, ವಿಧಾನಸಭಾ ಶಾಸಕರುಗಳಾದ ಅರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಎಸ್. ಕುಮಾರ್ ಬಂಗಾರಪ್ಪ, ಸಂಗಮೇಶ್ವರ ಬಿ.ಕೆ., ಕೆ.ಬಿ. ಅಶೋಕ್ ನಾಯ್ಕ್, ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರುಗಳಾದ ಆರ್. ಪ್ರಸನ್ನಕುಮಾರ್, ಆಯನೂರು ಮಂಜುನಾಥ್, ರುದ್ರೇಗೌಡ ಎಸ್., ಸಿ.ಎಂ. ಇಬ್ರಾಹಿಂ, ಎಸ್.ಎಲ್.ಭೋಜೆಗೌಡ, ಶ್ರೀಮತಿ ಭಾರತಿ ಶೆಟ್ಟಿ, ಕ.ಆ.ವೈ.ಸ.ಅ.ನಿ ಅಧ್ಯಕ್ಷ ಡಿ.ಎಸ್.ಅರುಣ್ಕುಮಾರ್, ತಾ.ಪಂ. ಅಧ್ಯಕ್ಷೆ ಗೀತಾ ಜಯಶೇಖರ್ ಸೇರಿದಂತೆ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಮತ್ತು ಸ್ಥಳೀಯ ಸಂಘ-ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಮಹಾನಗರ ಪಾಲಿಕೆಯ ಸದಸ್ಯರು, ಅಧಿಕಾರಿಗಳು, ಗಣ್ಯರು ಆಗಮಿಸಲಿರುವರು.
ಜಿಲ್ಲಾಧಿಕಾರಿ ಶಿವಕುಮಾರ್ ಕೆ.ಬಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಎಂ.ಶಾಂತರಾಜು, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ಎಸ್.ವಠಾರೆ ಇವರುಗಳು ಉಪಸ್ಥಿತರಿರುವರು.