ಶಿವಮೊಗ್ಗ, ನ.8 : ಹಲವು ವರ್ಷಗಳಿಂದ ನ್ಯಾಯಕ್ಕಾಗಿ ಕಾಯುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ತರಿಗೆ ನ್ಯಾಯಯುತವಾದ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಅವರು ಭಾನುವಾರ ಶಿವಮೊಗ್ಗ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸೂಕ್ರ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಬೆಂಗಳೂರಿನಲ್ಲಿ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದೆ. ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶರಾವತಿ ಸಂತ್ರಸ್ತರ ಸಮಸ್ಯೆ ಆದಷ್ಟು ಬೇಗನೇ ಪರಿಹರಿಸುವ ನಿಟ್ಟಿನಲ್ಲಿ ಶಾಸಕರೊಂದಿಗೆ ಸಹ ಸಭೆ ನಡೆಸಲಾಗಿದ್ದು, ಆದಷ್ಟು ಬೇಗನೆ ಸಮಸ್ಯೆಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.