News Next

ಶಿವಮೊಗ್ಗ, ಜನವರಿ- 15 : ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 17/01/2021 ರ ಭಾನುವಾರದಂದು 2020-21ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ಕಾಶಿಪುರ ಕೆನರಾ ಬ್ಯಾಂಕ್ ಹತ್ತಿರ, ರಾಮಣ್ಣ ಶ್ರೇಷ್ಠಿ ಪಾರ್ಕ್ ಹತ್ತಿರ, ಗೋಪಾಳ ಮೋರ್ ಎದುರು ಮತ್ತು ಮಲವಗೊಪ್ಪ ಚನ್ನಬಸವೇಶ್ವರ್ ದೇವಸ್ಥಾನದ ಹತ್ತಿರ ವಿಶೇಷ ಕಂದಾಯ ವಸೂಲಾತಿ ಕೌಂಟರ್‍ಗಳನ್ನು ತೆರೆಯಲಾಗಿದೆ.
ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!