News Next

ಶಿವಮೊಗ್ಗ, ಮಾರ್ಚ್- 18 : ಭದ್ರಾ ಜಲಾಶಯದಿಂದ ತುಂಗಾಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತ ಬೆಳೆಗಳನ್ನು ಸಂರಕ್ಷಿಸಲು ಮಾರ್ಚ್ 18 ರಿಂದ ಏಪ್ರಿಲ್ 01 ರವರೆಗೆ ತುಂಗಾಭದ್ರಾ ನದಿಗೆ ಸುಮಾರು 1.60 ಟಿ.ಎಂ.ಸಿ. ನೀರನ್ನು ಬಿಡಲಾಗುತ್ತಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಲು ಕೋರಲಾಗಿದೆ.ಆದ್ದರಿಂದ ನದಿಯ ದಂಡೆಯ ಕೆಳಮಟ್ಟದಲ್ಲಿ ಸಾರ್ವಜನಿಕರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಮಾಡುವುದನ್ನು ನಿರ್ಬಂಧಿಸಲಾಗಿದೆ. ಈ ಅವಧಿಯಲ್ಲಿ ರೈತರು ನದಿ ದಂಡೆಯಲ್ಲಿ ಅಳವಡಿಸಿದ ಪಂಪ್‍ಸೆಟ್‍ಗಳಿಂದ ನೀರೆತ್ತುವುದನ್ನು ಸಹ ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ವೃತ್ತದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

error: Content is protected !!