News Next

ಶಿವಮೊಗ್ಗ, ಏಪ್ರಿಲ್ – 27 : ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನ ಸಾಮಾನ್ಯರು ನ್ಯಾಯಾಲಯದ ಮೊರೆ ಹೋಗಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಕಷ್ಟಕರವಾಗುವುದರಿಂದ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಸಹಾಯವಾಣಿ 180042590900 ಹಾಗೂ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಸೇವೆಗಳ ಸಹಾಯವಾಣಿ ಸಂಖ್ಯೆ 9482269030 ಮತ್ತು 9141020249 ಗಳನ್ನು ಜಾರಿಗೆ ತಂದಿವೆ.
ಸಾರ್ವಜನರಿಕರು ತಮ್ಮ ಕಾನೂನಾತ್ಮಕ ಸಮಸ್ಯೆಗಳಿಗೆ ಈ ಸಹಾಯವಾಣಿ ಸಂಖ್ಯೆಗಳ ಸದುಪಯೋಗಪಡೆದುಕೊಳ್ಳುವಂತೆ ಜಿ.ಕಾ.ಸೇ.ಪ್ರಾ.ದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶೆ ಸರಸ್ವತಿ ಕೆ.ಎನ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

error: Content is protected !!