News Next

ಶಿವಮೊಗ್ಗ, ಸೆಪ್ಟಂಬರ್ 15 : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ರಾಜೀವ್‍ಗಾಂಧಿ ಗ್ರಾಮೀಣ ವಸತಿ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಪರಿಶಿಷ್ಟ ವರ್ಗದ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಾದ ಹಕ್ಕಿಪಿಕ್ಕಿ, ಮೇದ, ಹಸಲರು, ಗೊಂಡ ಮತ್ತು ಡುಂಗ್ರಿಗರಾಸಿಯ ಜನಾಂಗದವರಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿ ನಿವೇಶನ ಒದಗಿಸುವ ಹಾಗೂ ಮನೆ ನಿರ್ಮಾಣ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲಾಗುತ್ತಿದ್ದು, ಈ ಜನಾಂಗದ ನಿವೇಶನರಹಿತರಿಗೆ ಹಾಗೂ ನಿವೇಶನ ಹೊಂದಿರುವವರಿಗೆ ಮನೆ ನಿರ್ಮಾಣಕ್ಕಾಗಿ ಅರ್ಜಿ ಆಹ್ವಾನಿಸಿದೆ.
ನಿಗಧಿತ ನಮೂನೆ ಅರ್ಜಿಗಳನ್ನು ಸಂಬಂಧಿಸಿದ ತಾಲೂಕು ಸಹಾಯಕ ನಿರ್ದೇಶಕರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆಗಳಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಿಸಿದ ದಾಖಲೆಗಳೊಂದಿಗೆ ಅದೇ ಕಚೇರಿಗೆ ದಿ: 20-09-2021 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-279222 / 9482762350 ಗಳನ್ನು ಸಂಪರ್ಕಿಸುವುದು.

error: Content is protected !!