ಶಿವಮೊಗ್ಗ ಮೇ 18 : ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ 2022-23 ನೇ ಸಾಲಿಗೆ ಖಾಸಗಿ ಅನುದಾನಿತ/ಖಾಸಗಿ ಶಾಶ್ವತ ಅನುದಾನರಹಿತ ಪದವಿಪೂರ್ವ ಕಾಲೇಜುಗಳಲ್ಲಿ ಹೊಸ ಭಾಷೆ/ಸಂಯೋಜನೆ ಹಾಗೂ ಹೆಚ್ಚುವರಿ ವಿಭಾಗಗಳನ್ನು ಪ್ರಾರಂಭಿಸಲು ಇಚ್ಚಿಸುವ ಕಾಲೇಜುಗಳು ಅರ್ಜಿ ಸಲ್ಲಿಸಬಹುದು.

ಪದವಿಪೂರ್ವ ಶಿಕ್ಷಣ ಇಲಾಖೆಯ ವೆಬ್‍ಸೈಟ್ www.pue.karnataka.gov.in ಇಲ್ಲಿ new combination/language and add section applicationಈ ಲಿಂಕನ್ನು ಬಳಸಿ ಮೇ 25 ರ ಸಂಜೆ 5.30 ರೊಳಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲು ಅವಕಾಶವಿರುವುದಿಲ್ಲ. ಈ ಸಂಬಂಧ ಸುತ್ತೋಲೆ ಮತ್ತು ವೇಳಾಪಟ್ಟಿಯನ್ನು ಇಲಾಖಾ ಜಾಲತಾಣದಿಮದ ಪಡೆಯಬಹುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

error: Content is protected !!