ಶಿವಮೊಗ್ಗ, ಜೂನ್ 07 : ದಿನಾಂಕ : 08.06.22 ನೇ ಬುಧವಾರ ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮೇಳ ಹಮ್ಮಿಕೊಳ್ಳಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ಮೊದಲನೇ ಮತ್ತು ಎರಡನೇ ಡೋಸ್ ನೀಡಲಾಗುತ್ತದೆ ಹಾಗೂ ಶಾಲೆಗಳಲ್ಲಿ 12 ರಿಂದ 14 ವರ್ಷದ ಮಕ್ಕಳಿಗೆ ಮತ್ತು 15 ರಿಂದ 17 ವರ್ಷದ ಮಕ್ಕಳಿಗೆ ಕ್ರಮವಾಗಿ ಕಾರ್ಬೇವ್ಯಾಕ್ಸ್ ಮತ್ತು Covaxin ಲಸಿಕೆ ಮೊದಲನೇ ಮತ್ತು ಎರಡನೇ ಡೋಸ್ ಲಸಿಕೆ ನೀಡಲಾಗುವುದು ಎಲ್ಲಾ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ದಾಟಿದ ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು
ದೇಶದಲ್ಲಿ ಕೋವಿಡ್ ಸಾಂಕ್ರಾಮಿಕ ಪ್ರಕರಣಗಳು ಹೆಚ್ಚಾಗಿದ್ದು 4 ನೇ ಅಲೆ ಬರುವ ಸಂಭವವಿರುವ ಕಾರಣ ಸಾರ್ವಜನಿಕರು ತಪ್ಪದೇ ಕೋವಿಡ್ ಲಸಿಕೆ ಪಡೆಯುವಂತೆ ಡಾ. ನಾಗರಾಜ ನಾಯ್ಕ್ ಜಿಲ್ಲಾ ಲಸಿಕಾಧಿಕಾರಿ ಮತ್ತು ಡಾ. ರಾಜೇಶ್ ಸುರಗಿಹಳ್ಳಿ DHO ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ಕೋರಿರುತ್ತಾರೆ