ಶಿವಮೊಗ್ಗ, ಮೇ 16: ಶಿವಮೊಗ್ಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2019-20ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಭಾರತ/ಕರ್ನಾಟಕ ರಾಜ್ಯದ ಶಾಸನಬದ್ಧ ಅಂಗೀಕೃತ ವಿಶ್ವವಿದ್ಯಾಲಯಗಳಲ್ಲಿ ಪೂರ್ಣಕಾಲಿಕವಾಗಿ ಎಂ.ಫಿಲ್ ಮತ್ತು ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ ಫೆಲೋಶಿಫ್ ನೀಡಲು ಉದ್ದೇಶಿಸಿದ್ದು, ಆಸಕ್ತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ವಿದ್ಯಾರ್ಥಿಗಳು ಫೆಲೋಶಿಫ್‍ಗಾಗಿ ನಿಗಧಿತ ನಮೂನೆ ಅರ್ಜಿಯನ್ನು ಇಲಾಖಾ ವೆಬ್‍ಸೈಟ್ www.gokdom.kar.nic.in & https://dom.karnataka.gov.in/shivamogga ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಚಿಸಿರುವ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 2ನೇ ಮಹಡಿ, ಜಿಲ್ಲಾ ಪಂಚಾಯತ್ ಕಟ್ಟಡ, ಕುವೆಂಪು ರಸ್ತೆ, ಶಿವಮೊಗ್ಗ ಇಲ್ಲಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿ ಧರ್ಮಪ್ಪ.ಟಿ. ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆ ದೂ.ಸಂ. 08182-220206ನ್ನು ಸಂಪರ್ಕಿಸುವುದು.

error: Content is protected !!