ಹಿರಿಯ ನಾಗರಿಕರ ದಿನಾಚರಣೆ ಯು ದಿನಾಂಕ – 1-10-2022 ರಂದು ಶನಿವಾರ ಬೆಳಿಗ್ಗೆ ಶಿವಮೊಗ್ಗ ತಾಲ್ಲೂಕಿನ ಅಬ್ಬಲಗೆರೆ ಗ್ರಾಮದಲ್ಲಿ ನಡೆಯಿತು. ಶ್ರಮದಾನವನ್ನ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಬಸಮ್ಮ ಉದ್ಘಾಟಿಸಿದರು.
ಕಾನೂನು ಜಾಗೃತಿ ಹಾಗೂ ಹಿರಿಯ ನಾಗರೀಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಯುತ ರಾಜಣ್ಣ ಸಂಕಣ್ಣವರ್ ರವರು ಮಾತನಾಡಿ ಹಿರಿಯರನ್ನು ಗೌರವಿಸುವ ಜತೆಗೆ ಅವರ ಜತೆ ಸೌಹಾರ್ದ ರೀತಿಯಿಂದ ನಡೆದು ಕೊಳ್ಳ ಬೇಕಾದ್ದು ಎಲ್ಲರ ಕರ್ತವ್ಯ ಎಂದು ತಿಳಿಸಿದರು.
ಮಹಾತ್ಮಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್ ನ ನಿರ್ದೇಶಕರಾದ ಕೆ.ಸಿ.ಬಸವರಾಜ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪಂಚಾಯತ್ ಉಪಾಧ್ಯಕ್ಷೆ, ಪಂಚಾಯತ್ ಅಭಿರುದ್ದಿ ಅಧಿಕಾರಿ ಪರಮೇಶ್ವರ್ ರವರು ಹಿರಿಯ ನಾಗರೀಕರ ಸಂರಕ್ಷಣೆ ಹಾಗೂ ಸ್ವಚತೆ ಬಗೆಗೆ ಪ್ರಮಾಣ ವಚನ ಭೋದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಅಬ್ಬಲಗೆರೆ ಗ್ರಾಮದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರು , ಮಹಾತ್ಮಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್ ಹಾಗೂ ಎನ್. ವೈ. ಕೆ. ಸ್ವಯಂ ಸೇವಕರು , ಗ್ರಾಮದಲ್ಲಿ ಸ್ವಚತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.