,ಶಿವಮೊಗ್ಗ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್), ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಎಸ್ಎಸ್ಎಲ್ಸಿ ಮತ್ತು ಐಟಿಐ ಅಂಕಪಟ್ಟಿಗಳು, ಜಾತಿ ಪ್ರಮಾಣ ಪತ್ರ, ಆಧಾರ್ ಮತ್ತು ಪಾನ್ (PAN) ಕಾರ್ಡ್, ಎನ್ಸಿವಿಟಿ ಪೋರ್ಟಲ್ ರಿಜಿಸ್ಟ್ರೇಷನ್ ನಂಬರ್, ಎಂಪ್ಲಾಯ್ಮೆಂಟ್ ಕಾರ್ಡ್ ಮತ್ತು 04 ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸಬೇಕು.
ಈ ಎಲ್ಲಾ ದಾಖಲೆಗಳ ಮೂಲ ಪ್ರತಿ ಹಾಗೂ 2 ಸೆಟ್ ನಕಲು ಪ್ರತಿಗಳನ್ನು ತೆಗೆದುಕೊಂಡು ದಿ: 14/10/2022 ರೊಳಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ದೂರವಾಣಿ ಸಂಖ್ಯೆ :08182-255293, 9482023412, 9108235132 ಗಳನ್ನು ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
—————-