ಶಿವಮೊಗ್ಗ ಅಕ್ಟೋಬರ್ 10
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆದೇಶದಂತೆ ಈಗಾಗಲೇ ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಕೋವಿಡ್-19 ಲಸಿಕೆ ನೀಡಲಾಗುತ್ತಿದೆ.
12 ರಿಂದ 17 ವರ್ಷದ ಎಲ್ಲಾ ಮಕ್ಕಳು ಮತ್ತು 18 ವರ್ಷ ಮೇಲ್ಪಟ್ಟ ಎಲ್ಲ ಸಾರ್ವಜನಿಕರು ಕೋವಿಡ್-19 ಎರಡನೇ ಡೋಸ್ ಮತ್ತು ಬೂಸ್ಟರ್ ಡೋಸ್ ಲಸಿಕೆಯನ್ನು ಹತ್ತಿರದ ಜಿಲ್ಲಾಸ್ಪತ್ರೆ, ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ನಗರ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವ್ಯಾಕ್ಸಿನ್/ಕೋವಿಶೀಲ್ಡ್ ಹಾಗೂ ಕಾರ್ಬಿವ್ಯಾಕ್ಸ್ ಕೋವಿಡ್ 19 ಲಸಿಕೆ ಲಭ್ಯವಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮನವಿ ಮಾಡಿದ್ದಾರೆ.

error: Content is protected !!