
ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ಯೋಜನೆ ಅನುಷ್ಠಾನಗೊಳಿಸಿದ್ದು, ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿಗೆ ಸುವರ್ಣಾವಕಾಶ ಒದಗಿಸಿದೆ.
ಯೋಜನೆಯ ಪ್ರಯೋಜನ ನಾಲ್ಕು ವಿಧಗಳಲ್ಲಿ ಸಿಗುತ್ತಿದ್ದು, ವೈಯಕ್ತಿಕ ಉದ್ದಿಮೆದಾರರು ಮತ್ತು ಗುಂಪುಗಳು ವಿಧದಲ್ಲಿ ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಪ್ರಾರಂಭಿಸಲು ಹಾಗೂ ಚಾಲ್ತಿಯಲ್ಲಿರುವ ಉದ್ದಿಮೆಗಳನ್ನು ವಿಸ್ತರಿಸಲು ಅವಕಾಶ ಒದಗಿಸಲಾಗಿದೆ.
18 ವರ್ಷ ಮೇಲ್ಪಟ್ಟವರು ಮತ್ತು ಯಾವುದೇ ಕನಿಷ್ಠ ವಿದ್ಯಾರ್ಹತೆ ಇಲ್ಲ. ಇತರೆ ಸರ್ಕಾರಿ ಯೋಜನೆಗಳಲ್ಲಿ ಸಹಾಯಧನ ಸಂಪರ್ಕಿತ ಬ್ಯಾಂಕ್ ಸಾಲ ಪಡೆದಿದ್ದರೂ ಸಹ ಅರ್ಹರು. ವೈಯಕ್ತಿಕ ಉದ್ದಿಮೆದಾರರು, ಮಾಲೀಕತ್ವದ ಸಂಸ್ಥೆಗಳಿಗೆ, ಪಾಲುದಾರಿಕೆ ಸಂಸ್ಥೆಗಳಿಗೆ, ಖಾಸಗಿ ಕಂಪನಿಗಳು, ರೈತ ಉತ್ಪಾದಕ ಸಂಸ್ಥೆಗಳಿಗೆ, ಸರ್ಕಾರೇತರ ಸಂಸ್ಥೆಗಳಿಗೆ ಮತ್ತು ಸ್ವಸಹಾಯ ಸಂಘಗಳಿಗೆ ಸಾಲ ಸಂಪರ್ಕಿತ ಶೇ. 35 ರಷ್ಟು ಸಹಾಯಧನ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಶೇ. 15 ಸಹಾಯಧನ, ಗರಿಷ್ಟ 15 ಲಕ್ಷ ರೂ. ಅಥವಾ ಶೇ 50% ಪಡೆಯಲು ಅವಕಾಶ ಇದೆ.

ಪ್ರಾಥಮಿಕ ಬಂಡವಾಳ ವಿಧ : ಆಹಾರ ಸಂಸ್ಕರಣಾ ಚಟುವಟಿಕೆಗಳಲ್ಲಿ ತೊಡಗಿರುವ ಸ್ವಸಹಾಯ ಸಂಘಗಳ ಸದಸ್ಯರುಗಳಿಗೆ ದುಡಿಯುವ ಬಂಡವಾಳ ಮತ್ತು ಸಣ್ಣ ಉಪಕರಣಗಳ ಖರೀದಿಗಾಗಿ ಪ್ರತಿ ಸದಸ್ಯರಿಗೆ ಗರಿಷ್ಟ 40,000 ರೂ.. ಪ್ರತೀ ಸ್ವಸಹಾಯ ಸಂಘಕ್ಕೆ ಗರಿಷ್ಟ 4 ಲಕ್ಷ ರೂ. ಪಡೆಯಲು ಅವಕಾಶ.
ಸಾಮಾನ್ಯ ಮೂಲಭೂತ ಸೌಕರ್ಯ ಸ್ಥಾಪನೆಗೆ ಸಹಾಯಧನ : ಸಾಮಾನ್ಯ ಮೂಲಭೂತ ಸೌಕರ್ಯ ಸೃಷ್ಟಿಗೆ ಶೇ 35 ರಷ್ಟು ಸಾಲ ಸಂಪರ್ಕಿತ ಸಹಾಯ ಧನ, ಗರಿಷ್ಠ ಸಹಾಯಧನ 3 ಕೋಟಿ ರೂ. ಹಾಗೂ ಗರಿಷ್ಠ ಯೋಜನಾ ವೆಚ್ಚ 10 ಕೋಟಿ ರೂ.. ಅರ್ಹ ಸಂಸ್ಥೆಗಳು : ರೈತ ಉತ್ಪಾದಕ ಸಂಸ್ಥೆಗಳು, ರೈತ ಉತ್ಪಾದಕ ಕಂಪನಿಗಳು, ಸಹಕಾರಿಗಳು, ಸ್ವಸಹಾಯ ಸಂಘಗಳು, ಅದರ ಒಕ್ಕೂಟ ಮತ್ತು ಸರ್ಕಾರಿ ಸಂಸ್ಥೆಗಳು.
ಅರ್ಜಿದಾರರ ಸಂಸ್ಥೆಯ ಕನಿಷ್ಟ ವಹಿವಾಟು ಮತ್ತು ಅನುಭವದ ಪೂರ್ವ ಷರತ್ತುಗಳಿಲ್ಲ. ವಿಂಗಡಣೆ, ಶ್ರೇಣೀಕರಣ, ಸಂಗ್ರಹಣೆ, ಸಾಮಾನ್ಯ ಸಂಸ್ಕರಣೆ, ಪ್ಯಾಕೇಜಿಂಗ್ ಮತ್ತು ಪ್ರಯೋಗಾಲಯ ಇತ್ಯಾದಿ ಸ್ಥಾಪಿಸಲು ಅವಕಾಶ.
ಬ್ರಾಂಡಿಂಗ್ ಮತ್ತು ಮಾರುಕಟ್ಟೆಗೆ ಸಹಾಯ : ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಚಟುವಟಿಕೆಗಳಾದ ಪ್ಯಾಕೇಜಿಂಗ್, ಜಾಹೀರಾತು, ಸಾಮಾನ್ಯ ಬ್ರಾಂಡ್ ಅಭಿವೃದ್ಧಿ, ಚಿಲ್ಲರೆ ಮಾರಾಟ ಸಂಸ್ಥೆಗಳೊಂದಿಗೆ ಒಡಂಬಡಿಕೆ ಇತ್ಯಾದಿಗಳಿಗಾಗಿ ಶೇ 50 ರಷ್ಟು ಸಹಾಯಧನ. ಅರ್ಹ ಸಂಸ್ಥೆಗಳು: ರೈತ ಉತ್ಪಾದಕ ಸಂಸ್ಥೆಗಳು, ಕಂಪನಿಗಳು, ಸಹಕಾರಿಗಳು, ಸ್ವಸಹಾಯ ಸಂಘಗಳು, ಸಹಕಾರಿ ಸಂಸ್ಥೆಗಳು ಮತ್ತು ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ವಿಶೇಷ ಉದ್ದೇಶ ಸಂಸ್ಥೆ(SPV).
ಹೆಚ್ಚಿನ ಮಾಹಿತಿ ಹಾಗೂ ಅರ್ಜಿಸಲ್ಲಿಕೆಗೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಿ ಅಥವಾ ಕೆಪೆಕ್ ಸಂಸ್ಥೆಯ ಯೋಜನಾ ನಿರ್ವಹಣಾ ಘಟಕ ಸಂಪರ್ಕಿಸಬಹುದಾಗಿದೆ. 9164024818, 9731201215, 9844468648, 9741008486 ಸಂಖ್ಯೆಗಳಿಗೆ ಕರೆ ಮಾಡಬಹುದಾಗಿದೆ.