
ಹೊಸನಗರ: ತಾಲೂಕಿನಲ್ಲಿ ಹಾದು ಹೋಗುವ ರಾಣಿಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿಗೆ (NH-766c) ಅಡ್ಡಲಾಗಿ ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ ಕೆಲವು ಕಾಲ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿತ್ತು.
ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಮೂಲೆಗದ್ದೆ ಮಠ ಬಸ್ ನಿಲ್ದಾಣದ ಸಮೀಪ ಮಂಗಳವಾರ ತಡರಾತ್ರಿ ಸುರಿದ ಭೀಕರ ಮಳೆಯಿಂದ ಬೃಹದಾಕಾರದ ಮರ ಧರಾಶಾಯಿ ಆಗಿತ್ತು.
ವಿಷಯ ತಿಳಿದು ಸ್ಥಳಕ್ಕೆ ಗ್ರಾಮಾಡಳಿತ,ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಸಹಕಾರದಿಂದ ತೆರವು ಕಾರ್ಯಕ್ಕೆ ಮುಂದಾದ ಪರಿಣಾಮ ಕಲವೇ ಗಂಟೆಗಳಲ್ಲಿ ವಾಹನ ಸಂಚಾರಕ್ಕೆ ಹಾದಿ ಸುಗಮವಾಯ್ತು..