ಶಿವಮೊಗ್ಗ, ಅಕ್ಟೋಬರ್ 16 : ಕೃಷಿ ಇಲಾಖೆಯ ಕೃಷಿ ಸಂಸ್ಕರಣೆ ಯೋಜನೆಯಡಿ ಹಿಟ್ಟಿನ ಗಿರಣಿ, ಖಾರ ಕುಟ್ಟುವ ಯಂತ್ರ, ಶಾವಿಗೆ ಯಂತ್ರ, ಭತ್ತದ ಮಿಲ್, ರೊಟ್ಟಿ ಮಾಡುವ ಯಂತ್ರ ಹಾಗೂ ಸಣ್ಣ ಎಣ್ಣೆ ಗಾಣಗಳು ಸರ್ಕಾರ ಸಹಾಯಧನದಲ್ಲಿ ಲಭ್ಯವಿದ್ದು, ರೈತರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಿಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಿ ಈ ಯೋಜನೆಯ ಉಪಯೋಗ ಪಡೆಯುವಂತೆ ಜಂಟಿ ಕೃಷಿ ನಿರ್ದೇಶಕರ ಡಾ. ಎಂ. ಕಿರಣ್‌ಕುಮಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

error: Content is protected !!