ಶಿವಮೊಗ್ಗ. ಅಕ್ಟೋಬರ್ 21 ; ತೋಟಗಾರಿಕೆ ಇಲಾಖೆಯು ಮಡಕೇರಿಯ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ದಿ;05.11.2024 ರಿಂದ ದಿ:04.02.2025ರ ವರೆಗೆ 3 ತಿಂಗಳು ಜೇನುಗಾರಿಕೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಿದೆ.
ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರುವ 18-35 ವಯಸ್ಸಿನ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅಭ್ಯರ್ಥಿಗಳು ಅಥವಾ ಅಭ್ಯರ್ಥಿಗಳ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿದ್ದು, ಸ್ವಂತ ಸಾಗುವಳಿ ಮಾಡುತ್ತಿರಬೇಕು.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ತೋಟಗಾರಿಕೆ ಇಲಾಖೆಯ ವೆಬ್‌ಸೈಟ್ https://horticulturedir.karnataka.gov.in ಅಥವಾ ಶಿವಮೊಗ್ಗ ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರು ಕಚೇರಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ ಹಾಗು ಸೂಕ್ತ ದಾಖಲೆಗಳನ್ನು ಲಗತ್ತಿಸಿ ಅ.28 ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.