ಶಿವಮೊಗ್ಗ: ‘ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ದಿ.ಚಂದ್ರಶೇಖರ ಅವರ ಸಾವಿಗೆ ಸರ್ಕಾರದಿಂದ ಖಂಡಿತ ನ್ಯಾಯ ಒದಗಿಸಲಾಗುವುದು. ಅದೇ ರೀತಿ, ಮೃತರ ಕುಟುಂಬಕ್ಕೆ ವೈಯಕ್ತಿಕ ಸಹಕಾರ ನೀಡಲಾಗುವುದು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಎಸ್.ಮಧುಬಂಗಾರಪ್ಪ ಹೇಳಿದರು.

ಬುಧವಾರ ಚಂದ್ರಶೇಖರ ಅವರ ವಿನೋಬ ನಗರದ ನಿವಾಸಕ್ಕೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವಾನ ತಿಳಿಸಿದ ಅವರು, ಮಾಧ್ಯಮಗಳಿಗೆ ಪ್ರತಿಕ್ರಿಸಿದರು.

ಈ ಘಟನೆಯಿಂದ ಮನಸ್ಸಿಗೆ ನೋವುಂಟಾಗಿದೆ. ಜವಬ್ದಾರಿಯುತ ಸ್ಥಾನದಲ್ಲಿರುವವರಿಗೆ ಈ ರೀತಿ ಆಗಕೂಡದು. ಉಸ್ತುವಾರಿ ಸಚಿವನಾದ ನನಗೆ, ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವುದು ನನ್ನ ಜವಬ್ದಾರಿ. ಮೃತರ ಕುಟುಂಬ ಸದಸ್ಯರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ವೈಯಕ್ತಿಕವಾಗಿ ಭೇಟಿ ಮಾಡಿಸುವೆ. ಮೃತರ ಕುಟುಂಬದ ದುಃಖ ಭರಿಸಲು ಖಂಡಿತ ಸಾಧ್ಯವಿಲ್ಲ. ಆದರೆ, ಸರ್ಕಾರದ ಹಂತದಲ್ಲಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಮೃತ ಚಂದ್ರಶೇಖರ ಅವರ ಮಕ್ಕಳ ಶೈಕ್ಷಣಿಕ ವಿದ್ಯಭ್ಯಾಸಕ್ಕೆ ವೈಯಕ್ತಿಕ ಸಹಕಾರ ನೀಡಲಾಗುವುದು. ಮಕ್ಕಳ ಭವಿಷ್ಯಕ್ಕೆ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು. ಸಚಿವ ಬಿ.ನಾಗೇಂದ್ರ ಅವರ ರಾಜಿನಾಮೆ ಕುರಿತ ನಾನು ಚರ್ಚಿಸುವುದಿಲ್ಲ. ಘಟನೆ ಕುರಿತ, ತನಿಖೆ ನಡೆಯುತ್ತಿದೆ. ತಪ್ಪಿತಸ್ಥರಿಗೆ ಕಾನೂನಿನ ಅಡಿಯಲ್ಲಿ ಖಂಡಿತ ಶಿಕ್ಷೆ ಆಗಲಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಪ್ರಮುಖರಾದ ಕಲಗೋಡು ರತ್ನಾಕರ್, ಜಿ.ಡಿ.ಮಂಜುನಾಥ, ಸಂತೇಕಡೂರು ವಿಜಯ್ ಇದ್ದರು.

error: Content is protected !!