ಅಡಿಕೆ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ

ಶಿವಮೊಗ್ಗ, ಸೆಪ್ಟಂಬರ್ 03:  ಕರ್ನಾಟಕದಲ್ಲಿ 6.75 ಲಕ್ಷ ಹೆಕ್ಟರ್ ಪ್ರದೇಶದಿಂದ 10.24 ಲಕ್ಷ ಟನ್ ಉತ್ಪಾದನೆ ಆಗುತ್ತಿದ್ದು, ಭಾರತದ ಒಟ್ಟು ಉತ್ಪಾದನೆಯ ಶೇ.75 ರಷ್ಟು ಅಡಿಕೆ ಬೆಳೆ ಕರ್ನಾಟಕದಲ್ಲಿ ಉತ್ಪಾದನೆಯಾಗುತ್ತಿದೆ. ಅಡಿಕೆ ಬೆಳೆಯು ಹಲವಾರು ರೋಗಗಳಿಗೆ ತುತ್ತಾಗುತ್ತಿದ್ದು, ಈ ಹಿಂದೆ ಅಡಿಕೆಯಲ್ಲಿ ಕಡಿಮೆ ಹಾನಿ ಉಂಟು ಮಾಡುತ್ತಿದ್ದ ರೋಗಗಳು ಇತ್ತೀಚಿನ ವರ್ಷಗಳಲ್ಲಿ ವಾತಾವರಣದಲ್ಲಿ ಉಂಟಾಗುತ್ತಿರುವ ವೈಪರಿತ್ಯದಿಂದಾಗಿ ಹೆಚ್ಚು ಹಾನಿಯನ್ನುಂಟುಮಾಡುತ್ತಿವೆ. ಅವುಗಳಲ್ಲಿ ಎಲೆಚುಕ್ಕೆ ರೋಗವು ಪ್ರಮುಖವಾಗಿದ್ದು, ಮಲೆನಾಡಿನೆಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವುದು ಈ ಭಾಗದ ಬೆಳೆಗಾರರಲ್ಲಿ ಹೆಚ್ಚು ಆತಂಕಕ್ಕೆ ಕಾರಣವಾಗುತ್ತಿದೆ. ಅಡಿಕೆಗೆ ರೋಗ ಹಾಗೂ ಕೀಟಗಳ ಬಾಧೆಯಿಂದ ಇಳುವರಿ ಕುಂಠಿತವಾಗುತ್ತಿದ್ದು, ನಿರ್ದಿಷ್ಟ ಅವಧಿಯಲ್ಲಿ ಸರಿಯಾದ ನಿರ್ವಹಣಾ ಕ್ರಮಗಳನ್ನು ಅಳವಡಿಸಿಕೊಂಡಿದ್ದೇ ಆದಲ್ಲಿ, ಈ ರೋಗದ ಬಾಧೆ ಹಾಗೂ ಹರಡುವಿಕೆಯನ್ನು ಸಂಪೂರ್ಣವಾಗಿ ತಡೆಗಟ್ಟಬಹುದು. ಆದ್ದರಿಂದ ಈ ರೋಗದ ಲಕ್ಷಣಗಳು, ಹರಡುವಿಕೆ ಮತ್ತು ತೆಗೆದುಕೊಳ್ಳಬೇಕಾದ ನಿರ್ವಹಣಾ ಕ್ರಮಗಳನ್ನು ಈ ಕೆಳಗೆ ವಿವರಿಸಲಾಗಿದೆ.


ರೋಗಕಾರಕಗಳು : ಕೊಲ್ಲೆಟೋಟ್ರೆöÊಕಮ್ ಗ್ಲೀಯೋಸ್ಪೊರೈಡ್ಸ್, ಫಿಲ್ಲೊಸ್ಟಿಕ್ಟ ಅರಕೆ ಮತ್ತು ಪೆಸ್ಟಲೋಪ್ಸಿಸ್ ಅರಕೆ
ರೋಗದ ಲಕ್ಷಣಗಳು:- ಫಿಲ್ಲೊಸ್ಟಿಕ್ಟ ಶಿಲೀಂಧ್ರವು ಮರಗಳ ಸೋಗೆಗಳ ಮೇಲ್ಭಾಗದಲ್ಲಿ ದೊಡ್ಡ ಗಾತ್ರದ ಕಂದು ಮತ್ತು ಕಪ್ಪು ಬಣ್ಣದ ಚುಕ್ಕೆಗಳ ರೂಪದಲ್ಲಿ ಕಾಣಿಸುತ್ತವೆ. ಕೊಲ್ಲೆಟೋಟ್ರೆöÊಕಮ್ ಶಿಲೀಂಧ್ರವು ಗರಿಗಳ ಮೇಲೆ ಹಳದಿ ಮತ್ತು ಕಪ್ಪು ಬಣ್ಣದ ಚಿಕ್ಕ ಗಾತ್ರದ ಚುಕ್ಕೆಗಳು ಕಾಣಿಸುತ್ತವೆ ಹಾಗೂ ಗರಿಗಳು ತುದಿಯಿಂದ ಒಣಗಲು ಪ್ರಾರಂಭಿಸುತ್ತವೆ.ಪೆಸ್ಟಲೋಷಿಯಾ ಶಿಲೀಂಧ್ರವು ಗರಿಗಳ ಮೇಲೆ ನಸು ಹಳದಿ ಬಣ್ಣದ ಚುಕ್ಕೆಗಳು ಕಾಣಿಸುತ್ತವೆ.ಈ ಚುಕ್ಕೆಗಳು ಕೆಳಗಿನ ಎಲೆಗಳಿಂದ ಪ್ರಾರಂಭವಾಗಿ ಶೀಘ್ರವಾಗಿ ಒಂದಕ್ಕೊAದು ಕೂಡಿಕೊಂಡು ಪೂರ್ತಿ ಹೆಡೆಗಳನ್ನು ಆವರಿಸುತ್ತವೆ. ರೋಗ ಉಲ್ಬಣಗೊಂಡಾಗ ಹೆಡೆಗಳು ಒಣಗಲಾರಂಭಿಸುತ್ತವೆ. ಇಂತಹ ಒಣಗಿದ ಎಲ್ಲಾ ಹೆಡೆಗಳು ಕಾಂಡಕ್ಕೆ ಜೋತು ಬಿದ್ದು ಮರ ಶಕ್ತಿಕಳೆದುಕೊಂಡು ಇಳುವರಿ ಕುಂಠಿತಗೊಳ್ಳುತ್ತದೆ.
ರೋಗಕ್ಕೆ ಪೂರಕವಾದ ಅಂಶಗಳು:-
ಶಿಲೀAಧ್ರವು ರೋಗಗ್ರಸ್ಥ ಗರಿಗಳಲ್ಲಿ ವಾಸಿಸುವುದು, ಮಳೆಹನಿಗಳ ಚಿಮ್ಮುವಿಕೆಯಿಂದ ಶಿಲೀಂಧ್ರದ ಕಣಗಳು ಗಾಳಿಯಲ್ಲಿ ಸೇರಿ ಹೊಸ ಗರಿಗಳನ್ನು ತಲುಪುತ್ತವೆ. ಹಾಗೆಯೇ ತೇವಭರಿತ ಬಿಸಿಲಿನ ವಾತಾವರಣ, ಕಡಿಮೆ ಉಷ್ಣಾಂಶ (180 ರಿಂದ 240 ಸೆ) ಮತ್ತು ಹೆಚ್ಚಿನ ಆದÀ್ರತೆ (>85 %) ಈ ರೋಗದ ತೀವ್ರತೆ ಮತ್ತು ಹರಡುವಿಕೆಗೆ ಪೂರಕವಾದ ಅಂಶಗಳಾಗಿರುತ್ತವೆ. ರೋಗವು ವರ್ಷ ಪೂರ್ತಿ ಕಂಡುಬAದರೂ ಸಹ ಮಾರ್ಚ್ ನಿಂದ ಸೆಪ್ಟಂಬರ್ ತಿಂಗಳ ವರೆಗೂ ಹೆಚ್ಚಾಗಿ ಬಾಧೆಯನ್ನು ಉಂಟುಮಾಡುತ್ತದೆ.

ರೋಗದ ಹರಡುವಿಕೆ : – ಈ ರೋಗದ ಶಿಲೀಂಧ್ರಗಳು ಒಣಗಿ ಜೋತು ಬಿದ್ದಿರುವ ರೋಗಭಾದಿತ ಎಲೆಗಳಲ್ಲಿ ಮತ್ತು ಹಿಂಗಾರಗಳಲ್ಲಿ ವಾಸವಿರುತ್ತದೆ ಹಾಗೂ ಪೂರಕ ವಾತಾವರಣ ಸಿಕ್ಕಾಗ ಗಾಳಿ ಮತ್ತು ನೀರಿನ ಮುಖಾಂತರ ಆರೋಗ್ಯಕರ ಮರಗಳಿಗೆ ಹರಡುತ್ತದೆ.
ಹತೋಟಿ ಕ್ರಮಗಳು :-ರೋಗ ಬಾಧಿತ ಒಣಗಿದ ಗರಿಗಳನ್ನು ಕತ್ತರಿಸಿ ತೆಗೆದು ನಾಶಪಡಿಸುವುದರಿಂದ ರೋಗದ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯಬಹುದು. ಬಿಸಿಲು ಬೀಳುವಂತೆ ಮಾಡಲು ಅಂತರ ಬೆಳೆಗಳ ಅಥವಾ ಕಾಡು ಮರಗಳ ಹೆಚ್ಚುವರಿ ರೆಂಬೆಗಳನ್ನು ಕತ್ತರಿಸಿ ತೆಗೆಯುವುದು.  ಮರಗಳ ಉತ್ತಮ ಬೆಳವಣಿಗೆಗೆ ಕೊಟ್ಟಿಗೆ ಗೊಬ್ಬರದ ಜೊತೆಗೆ ಶಿಫಾರಿತ ಪ್ರಮಾಣದ ಪೋಷಕಾಂಶಗಳನ್ನು ಸಾರಜನಕ:ರಂಜಕ:ಪ್ರೆಟ್ಯಾಷ್ (100:40:140 ಗ್ರಾಂ ಪ್ರತಿ ಮರಕ್ಕೆ) ನೀಡಬೇಕು. ಶೇ. 1ರ ಬೋರ್ಡೋ ದ್ರಾವಣ ಅಥವಾ ಶೇ. 0.3ರ ತಾಮ್ರದ ಆಕ್ಸಿಕ್ಲೋರೈಡ್ ಶಿಲೀಂಧ್ರನಾಶಕಗಳನ್ನು ಒಂದು ಮಿ.ಲೀ. ಅಂಟು ದ್ರಾವಣ ಜೊತೆ ಬೆರೆಸಿ ಎಲೆಗಳಿಗೆ ಸಿಂಪಡಿಸುವುದು. ರೋಗ ಲಕ್ಷಣದ ಪ್ರಾರಂಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿಲೀಂಧ್ರನಾಶಕಗಳಾದ ಮ್ಯಾಂಕೋಜೆಬ್ (2.5 ಗ್ರಾಂ) ಅಥವಾ ಮ್ಯಾಂಕೋಜೆ಼಼ಬ್ ಶೇ. 63+ಕಾರ್ಬೆನ್‌ಡೈಜೀಮ್ ಶೇ. 12, 2.5 ಗ್ರಾಂ ಜೊತೆಗೆ ಅಂಟು ದ್ರಾವಣ (1 ಮಿ.ಲೀ.) ಪ್ರತೀ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು. ಹೆಕ್ಸಾಕೊನಜೋಲ್ ಶೇ. 5 ಎಸ್.ಸಿ/ಇ.ಸಿ ಅಥವಾ ಪ್ರೊಪಿಕೊನಜೋಲ್ ಶೇ. 25 ಇ.ಸಿ ಅಥವಾ ಟೆಬುಕೊನಜೋಲ್ ಶೇ. 39.38 ಎಸ್.ಸಿ ಅಂತರವ್ಯಾಪಿ ಶಿಲೀಂಧ್ರನಾಶಕಗಳನ್ನು 1 ಮಿ.ಲೀ. ಪ್ರತೀ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು. ರೋಗದ ಬಾಧೆಯು ಅಂತರ ಬೆಳೆಯಾದ ಕಾಳುಮೆಣಸು ಬೆಳೆಗೂ ಸಹ ಹರಡುವುದರಿಂದ ಇವುಗಳಿಗೂ ಸಹ ಸಿಂಪರಣೆ ಮಾಡಬೇಕು. ರೋಗ ಮತ್ತೆ ಕಾಣಿಸಿಕೊಂಡಲ್ಲಿ ಮೇಲೆ ತಿಳಿಸಿದ ಯಾವುದಾದರೊಂದು ಶಿಲೀಂಧ್ರ ನಾಶಕಗಳನ್ನು 20-25 ದಿನಗಳ ಅಂತರದಲ್ಲಿ ಸಿಂಪರಣೆಯನ್ನು ಪುನರಾವರ್ತಿಸಬೇಕು.ಸಾಮೂಹಿಕ ಹಂತದಲ್ಲಿ ಸಿಂಪರಣಾ ಕಾರ್ಯವನ್ನು ಕೈಗೊಳ್ಳುವುದರಿಂದ ರೋಗದ ಹರಡುವಿಕೆಯನ್ನು ತಡೆಗಟ್ಟಬಹುದು ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಅಡಿಕೆ ಸಂಶೋಧನಾ ಕೇಂದ್ರ, ನವಿಲೆ, ಶಿವಮೊಗ್ಗ ಪ್ರಕಟಣೆ ತಿಳಿಸಿದೆ.

error: Content is protected !!