ಶಿವಮೊಗ್ಗ, ಜನವರಿ 21 : ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ವಿದ್ಯುತ್ ರಹಿತ ಮನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಬೆಳಕು ಯೋಜನೆ”ಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ವೃತ್ತದ ಶಿವಮೊಗ್ಗ, ಭದ್ರಾವತಿ, ಸಾಗರ, ಶಿಕಾರಿಪುರ ವಿಭಾಗಗಳ ವ್ಯಾಪ್ತಿಯಲ್ಲಿನ ಉದ್ದೇಶಿತ ಗ್ರಾಹಕರು ವಿದ್ಯುತ್ ಸಂಪರ್ಕ ಪಡೆಯುವ ಸಂಬಂಧ ತಮ್ಮ ಸಮೀಪದ ಮೆಸ್ಕಾಂ ವಿಭಾಗೀಯ ಕಚೇರಿ / ಗ್ರಾಮ ಪಂಚಾಯತ್ ಕಚೇರಿಯನ್ನು ಜನವರಿ 31ರೊಳಗಾಗಿ ಸಂಪರ್ಕಿಸಿ, ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಮೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!