ಶಿವಮೊಗ್ಗ, ಡಿಸೆಂಬರ್ 26, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಶಿವಮೊಗ್ಗ, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ದೇಶೀಯ ವಿದ್ಯಾಶಾಲಾ ಸಮಿತಿ, ಬಸವೇಶ್ವರ ವೃತ್ತ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಡಿ.27 ರಂದು ಬೆಳಗ್ಗೆ 10 ಗಂಟೆಗೆ ಡಿ.ವಿ.ಎಸ್ ಪ್ರೌಢಶಾಲಾ ಆವರಣದಲ್ಲಿ 2023-24ರ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ನೆರೆವೇರಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಿ. ಸುಧಾಕರ್‍ರವರು ಆಗಮಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ನಗರ ಕ್ಷೇತ್ರ ಶಾಸಕ ಎಸ್.ಎನ್ ಚನ್ನಬಸಪ್ಪರವರು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಸಂಸದರು, ಶಾಸಕರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ದೇಶೀಯ ವಿದ್ಯಾಶಾಲಾ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು ಭಾಗವಹಿಸಲಿದ್ದಾರೆ.
