ವಿಶ್ವಜ್ಞಾನಿ ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ಆರಾಧಿಸುವುದಕ್ಕಿಂತಹ ಅವರ ವಿಚಾರಗಳನ್ನು ವೈಜ್ಞಾನಿಕವಾಗಿ ಅರಿತುಕೊಂಡು, ಬೋಧನೆಯಲ್ಲಿ ಅಳವಡಿಸಿಕೊಳ್ಳಬೇಕೆಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರತ್ ಅನಂತ್ ಮೂರ್ತಿ ಅವರು ಅಭಿಪ್ರಾಯಪಟ್ಟರು. ಅವರು ಕುವೆಂಪು ವಿಶ್ವವಿದ್ಯಾಲಯದ ಹಿರೇಮಠ ಸಭಾಂಗಣದಲ್ಲಿ ಕುವೆಂಪು ವಿಶ್ವವಿದ್ಯಾಲಯ ದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ವಿಚಾರಧಾರೆ ಮತ್ತು ಶಿಕ್ಷಣ ಎಂಬ ರಾಜ್ಯಮಟ್ಟದ ಕಾರ್ಯಾಗಾರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತಾಡಿದರು. ಉದ್ಘಾಟನೆ ಮಾಡಿ, ಮಾತಾಡಿದ ಶಿಕ್ಷಣತಜ್ಞ ಪ್ರೊ.ಏಕನಾಥ್ ಆರ್. ಎಕಬೊಟೆ ಅವರು ಅಂಬೇಡ್ಕರ್ ಬಹು ದೊಡ್ಡ ಶಿಕ್ಷಣತಜ್ಞರು ಅವರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.
ಓಬಳೇಶ್ ಘಟ್ಟಿ, ಡಾ.ಜಗನ್ನಾಥ ಕೆ.ಡಾಂಗೆ, ಹಣಕಾಸು ಅಧಿಕಾರಿ ಪ್ರೊ.ಎಚ್.ಎನ್..ರಮೇಶ್, ನಿರ್ದೇಶಕರಾದ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಉಪಸ್ಥಿತರಿದ್ದರು.
