ಶಿವಮೊಗ್ಗ, ಅಕ್ಟೋಬರ್ 21, ; ಸರ್ಕಾರದಿಂದ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಮೂಲಕ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಯೋಜನೆಗಳ ಪ್ರಯೋಜನ ಪಡೆಯಲು ಪ್ರೂಟ್ಸ್ ತಂತ್ರಾಂಶದಲ್ಲಿ ಸರ್ವೆ ನಂಬರ್ಗೆ ಆಧಾರ್ ಸಂಖ್ಯೆ ನಮೂದಿಸಿ ಎಫ್.ಐ.ಡಿ. ಸಂಖ್ಯೆ ಪಡೆಯುವುದು ಕಡ್ಡಾಯವಾಗಿದೆ.
ನೋಂದಣಿಯಾದ ವಿವರಗಳನ್ನು ಬ್ಯಾಂಕ್ನಿಂದ ಬೆಳೆ ಸಾಲ, ಬೆಳೆ ವಿಮೆ ಹಾಗೂ ಬೆಳೆಹಾನಿ ಪರಿಹಾರ, ಬೆಂಬಲ ಬೆಲೆ. ಬೆಳೆ ನಷ್ಟ ಪರಿಹಾರ / ಇನ್ ಪುಟ್ ಸಬ್ಸಿಡಿ ಮುಂತಾದ ಸವಲತ್ತುಗಳನ್ನು ಫ್ರೂಟ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ಜಮೀನಿನ ವಿಸ್ತೀರ್ಣದ ಆಧಾರದ ಮೇಲೆ ಮತ್ತು ಬೆಳೆ ಸಮೀಕ್ಷೆ ಆಧಾರದ ಮೇಲೆ ವಿತರಿಸಲಾಗುವುದರಿಂದ ರೈತರು ತಾವು ಹೊಂದಿರುವ ಎಲ್ಲಾ ಸರ್ವೆ ನಂಬರ್ಗಳನ್ನು ಈ ತಂತ್ರಾಂಶದಲ್ಲಿ ನೊಂದಾಯಿಸಿಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.