ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜೀವಕೋಶಗಳಿದ್ದಂತೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ರಾಜ್ಯ ಕುರುಬರ ಸಂಘದ ಮಾಜಿ ಅಧ್ಯಕ್ಷ ಎಸ್.ಪಿ.ಶೇಷಾದ್ರಿ
ಶಿವಮೊಗ್ಗ,ಜ.10: ಸರ್ಕಾರದ 5ನೇ ಮತ್ತು ಮಹತ್ವಕಾಂಕ್ಷಿ ಯೋಜನೆಯಾದ ಯುವನಿಧಿ ಶಿವಮೊಗ್ಗದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡುತ್ತಿರುವುದು ಅತ್ಯಂತ ಸಂತಸ ತಂದಿದೆ ಯುವನಿಧಿ ಯುವ ಜನರಿಗೆ ತುಂಬಾ ಅನುಕೂಲಕರವಾಗಲಿದೆ. ಎಂದು ತಿಳಿಸಿದರು.
ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಹಾಗೂ ಅಕ್ಕಪಕ್ಕದ ಜಿಲ್ಲೆಯ ಯುವಕರು ಮತ್ತು ಸಮಾಜದ ಬಾಂಧವರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕು. ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಅನೇಕ ಯೋಜನೆಗಳು ಜಾರಿಗೊಂಡು ಕರ್ನಾಟಕ ಕಲ್ಯಾಣ ರಾಜ್ಯವಾಗಲಿದೆ ಎಂದು ಎಸ್.ಪಿ.ಶೇಷಾದ್ರಿ ತಿಳಿಸಿದ್ದಾರೆ.