ಶಿವಮೊಗ್ಗ ಮೇ.31 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2024-25ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‍ಪಾಸ್ ವಿತರಣಾ ಕಾರ್ಯವನ್ನು ಜೂನ್-01 ರಿಂದ ಆರಂಭಿಸುತ್ತಿದ್ದ್ದು, ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್‍ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸಬೇಕಿರುತ್ತದೆ. ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‍ಗಳನ್ನು ವಿತರಿಸಲಾಗುವುದು. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು
URL-https://sevasindhu.karnataka.gov.inಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಕೆಳಕಂಡ ಕ್ರಮಗಳನ್ನು ಅನುಸರಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ. ನೆರೆ ರಾಜ್ಯದ ವಿಧ್ರ್ಯಾಥಿನಿಯರು ಕರ್ನಾಟಕ ರಾಜ್ಯದ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಈ ಕ್ರಮಗಳನ್ನು ಅನುಸರಿಸಿ ವಿದ್ಯಾರ್ಥಿ ಪಾಸುಗಳನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ.
ಆನ್ ಲೈನ್ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ವಿದ್ಯಾರ್ಥಿಗಳು, ಕರ್ನಾಟಕ-ಒನ್ ಮತ್ತು ಗ್ರಾಮ-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸ ಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ.30/- ಸೇವಾ ಶುಲ್ಕವನ್ನು ಆ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿರುತ್ತದೆ. ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‍ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‍ಎಂಎಸ್ ಮುಖೇನ ಕಳುಹಿಸಲಾಗುವುದು. ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‍ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್‍ಕಾರ್ಡ್ / ಡೆಬಿಟ್ ಕಾರ್ಡ್/UPI ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ. ಪಾಸ್ ವಿತರಣಾ ಕೌಂಟರ್‍ಗಳ ವಿವರಗಳನ್ನು ಹಾಗೂ ಪಾಸಿನ ದರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ https://ksrtc.karnataka.gov.in / student pass.ನಲ್ಲಿ ಒದಗಿಸಲಾಗಿದೆ.
ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ವಿಧ್ಯಾರ್ಥಿಗಳು ಆನ್‍ಲೈನ್ ಅಥವಾ ಗ್ರಾಮ ಒನ್/ಕರ್ನಾಟಕ ಒನ್‍ನಲ್ಲಿ ಅರ್ಜಿ ಸಲ್ಲಿಸಿ ಪಾಸ್ (ಸ್ಮಾರ್ಟ್‍ಕಾರ್ಡ್) ಪಡೆಯಲು ಕರ್ನಾಟಕಒನ್, ಶಿವಮೊಗ್ಗ, 01 ನೇ ಮಹಡಿ, ಖಾಸಗಿ ಬಸ್ ನಿಲ್ದಾಣ, ಶಿವಮೊಗ್ಗ-577201. ಶಿಕಾರಿಪುರ- ಸರ್ಕಾರಿ ಬಸ್ ನಿಲ್ದಾಣ ಕಾಂಪ್ಲೆಕ್ಸ್, ಕೊಠಡಿ ಸಂಖ್ಯೆ: 03, ಶಿಕಾರಿಪುರ-577427. ಭದ್ರಾವತಿ- ತಾಲ್ಲೂಕು ಕಛೇರಿ ರಸ್ತೆ, ಡಿ.ಸಿ.ಸಿ ಬ್ಯಾಂಕ್ ಹತ್ತಿರ, ಓಲ್ಡ್ ಟೌನ್, ಭದ್ರಾವತಿ. ಸಾಗರ-ಸಿಎಂಸಿ ಕೋರ್ಟ ರಸ್ತೆ, ತಾಲ್ಲೂಕು ಕಛೇರಿ ಎದುರು, ಸಾಗರ-577401. ಹೊನ್ನಾಳಿ-ಟಿಸ್ ಕಾಂಪ್ಲೆಕ್ಸ್, ಟಿಎಂ ರಸ್ತೆ, ತಾಲ್ಲೂಕು ಕಛೇರಿ ಎದುರು, ಹೊನ್ನಾಳಿ-577217. ಸೊರಬ-01 ನೇ ಮಹಡಿ, ನೂರ್ ಕಾಂಪ್ಲೆಕ್ಸ್, ಎಲ್.ಐ.ಸಿ ಕಛೇರಿ ಹತ್ತಿರ, ಎಸ್.ಎಸ್ ರಸ್ತೆ, ಸೊರಬ-577429. ಈ ಕರ್ನಾಟಕ ಒನ್ ಕೇಂದ್ರಗಳನ್ನು ಸಂಪರ್ಕಿಸಲು ಕೋರಿದೆ.