ಶಿವಮೊಗ್ಗ: ನಗರದ ಜೆಎನ್‌ಎನ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಜು.07 ರ ಭಾನುವಾರ ಬೆಳಗ್ಗೆ 10:30 ಕ್ಕೆ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಉಚಿತವಾಗಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತಾಗಿ ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಗುತ್ತಿದ್ದು, ಜೊತೆಯಲ್ಲಿ ವಿವಿಧ ಎಂಜಿನಿಯರಿಂಗ್‌ ವಿಭಾಗಗಳ ಪರಿಚಯ, ಉದ್ಯೋಗವಕಾಶಗಳು, ವಿವಿಧ ವಿದ್ಯಾರ್ಥಿ ವೇತನಗಳ ಕುರಿತಾಗಿ ತಜ್ಞರು ಮಾಹಿತಿ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ: 96324-71667 ಸಂಪರ್ಕಿಸಲು ಕೋರಿದೆ.

error: Content is protected !!