ಶಿವಮೊಗ್ಗ,ಅ.5: ಮಹಾನಗರ ಪಾಲಿಕೆಯಿಂದ ಆಚರಿಸಲಾಗುತ್ತಿರುವ ನಮ್ಮೂರ ನಾಡ ಹಬ್ಬ ಶಿವಮೊಗ್ಗ ದಸರಾದಲ್ಲಿ ಪ್ರಥಮ ಬಾರಿಗೆ ಗಮಕ ದಸರಾವನ್ನು ಕರ್ನಾಟಕ ಗಮಕ ಕಲಾ ಪರಿಷತ್ ಶಿವಮೊಗ್ಗ ಇದರ ಸಹಕಾರದೊಂದಿಗೆ ಅ.6ರ ಬೆಳಿಗ್ಗೆ 10ರಿಂದ ಸಂಜೆ 7ರವರೆಗೆ ಕಮಲಾ ನೆಹರೂ ಮಹಿಳಾ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಗಮಕ ದಸರಾ ಸಮಿತಿಯ ಸಹಕಾರ್ಯದರ್ಶಿ ಅನುಪಮ ಟಿ.ಆರ್. ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗಮಕಾ ದಸರಾದಲ್ಲಿ ವಿಚಾರಗೋಷ್ಠಿ, ರಾಜ್ಯ ಮಟ್ಟದ ಗಮಕ ಸ್ಪರ್ಧೆ, ಕವಿ ಕಾವ್ಯ ಪರಿಚಯ, ರಸ ಪ್ರಶ್ನೆ, ರೂಪಕ, ಹಿರಿಯ ಕಲಾವಿದರಿಂದ ಗಮಕ ವಾಚನ ಹಾಗೂ ವ್ಯಾಖ್ಯಾನ ಕಾರ್ಯಕ್ರಮಗಳು ಜರುಗಲಿವೆ ಎಂದರು.
ಅಂದು ಬೆಳಿಗ್ಗೆ 10ಕ್ಕೆ ಕರ್ನಾಟಕ ಗಮಕ ಕಲಾ ಪರಿಷತ್‍ನ ಅಧ್ಯಕ್ಷ ಡಾ.ಎ.ವಿ.ಪ್ರಸನ್ನ ಗಮಕ ದಸರಾವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಗಮಕ ಕಲಾ ಪರಿಷತ್‍ನ ಜಿಲ್ಲಾ ಶಾಖೆಯ ಗೌರವಾಧ್ಯಕ್ಷ ಟಿ.ಆರ್.ಅಶ್ವಥ್‍ನಾರಾಯಣ ಶೆಟ್ಟಿ, ಅಧ್ಯಕ್ಷ ಹೆಚ್.ಆರ್. ಸುಬ್ರಹ್ಮಣ್ಯಶಾಸ್ತ್ರಿ ಉಪಸ್ಥಿತರಿದ್ದು, ಅಧ್ಯಕ್ಷತೆಯನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ವಹಿಸಲಿದ್ದಾರೆ ಎಂದರು.
ಸಂಜೆ 6ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಸಮಾರೋಪ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಶಾಸಕ ಎಸ್.ಎನ್. ಚನ್ನಬಸಪ್ಪ, ಕುಮಾರವ್ಯಾಸ ಪ್ರಶಸ್ತಿ ಪುರಸ್ಕøತ ಗಮಕಿ ಮೈಸೂರಿನ ಡಾ. ಎನ್.ಕೆ. ರಾಮಶೇಷನ್ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ಗಮಕ ಕಲಾ ಪರಿಷತ್ ಶಿವಮೊಗ್ಗ ಶಾಖೆಯ ಉಪಾಧ್ಯಕ್ಷ ಡಾ.ಕೃಷ್ಣ ಎಸ್.ಭಟ್ ವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಗಮಕ ಕಲಾ ಪರಿಷತ್‍ನ ಶಿವಮೊಗ್ಗ ಜಿಲ್ಲಾ ಶಾಖೆಯ ಗೌರವಾಧ್ಯಕ್ಷ ಟಿ.ಆರ್.ಅಶ್ವಥ್‍ನಾರಾಯಣ ಶೆಟ್ಟಿ, ಅಧ್ಯಕ್ಷ ಹೆಚ್.ಆರ್. ಸುಬ್ರಹ್ಮಣ್ಯಶಾಸ್ತ್ರಿ, ಕಾರ್ಯದರ್ಶಿ ಕುಮಾರ ಶಾಸ್ತ್ರಿ, ಶ್ರೀಲಕ್ಷ್ಮೀ ಶಾಸ್ತ್ರಿ, ನಾಗರಾಜ್ ಉಪಸ್ಥಿತರಿರುವರು.

Leave a Reply

error: Content is protected !!