
15ನೇ ಹಣಕಾಸು ಯೋಜನೆ ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಇನ್ನೂ ಹಲವಾರು ಯೋಜನೆಗಳನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನವನ್ನು ಮಾಡಿ ಶಕುನವಳ್ಳಿ ಗ್ರಾಮ ಪಂಚಾಯಿತಿಯು 2022-23 ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ ಖರ್ಗೆ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿರುವ ಶಕುನವಳ್ಳಿ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಿದರು
ಗ್ರಾಮಗಳ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವ ಶಕುನವಳ್ಳಿ ಗ್ರಾಮ ಪಂಚಾಯಿತಿ
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮಾ ಸರ್ಕಾರದ ಯೋಜನೆಗಳನ್ನು ಯಶಸ್ವಿಯಾಗಿ ಗ್ರಾಮಸ್ಥರಿಗೆ ಮುಟ್ಟಿಸುವ ಕೆಲಸವನ್ನು ಮಾಡಿದ್ದೇವೆ ಸರ್ಕಾರ ನಾವು ಮಾಡಿದ ಕೆಲಸವನ್ನು ಗುರುತಿಸಿ ನಮಗೆ ಪುರಸ್ಕಾರವನ್ನು ಕೊಟ್ಟಿದೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಕೆಲಸ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ತಿಳಿಸಿದರು