ಶಿವಮೊಗ್ಗ, ಮಾರ್ಚ್ 27 ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿ, ಪುರಸಭೆ ಶಿರಾಳಕೊಪ್ಪ ಇವರ ವತಿಯಿಂದ ಮತದನಾ ಜಾಗೃತಿ ಕಾರ್ಯಕ್ರಮವನ್ನು ಮತಗಟ್ಟೆ ಸಂಖ್ಯೆ 67 ಮತ್ತು 68 ರಲ್ಲಿ ನಡೆಸಲಾಯಿತು.
ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ಜಯಣ್ಣ, ಭಾರತ ಚುನಾವಣಾ ಆಯೋಗ ನಡೆಸುವ ದೇಶದ ಅತೀ ದೊಡ್ಡ ಚುನಾವಣೆ ಲೋಕಸಭಾ ಚುನಾವಣೆಯಾಗಿದ್ದು ಪ್ರತಿಯೊಬ್ಬ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಹಾಕುವುದು ತಮ್ಮ ಕರ್ತವ್ಯ ಎಂದು ಭಾವಿಸಿ ಮೇ.7 ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ತಮ್ಮ ಮತವನ್ನು ಚಲಾಯಿಸಬೇಕು. ಮತದಾನಕ್ಕೆ ನೋಂದಣಿಯಾಗಿರುವ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಸ್ವೀಪ್ ಸಮಿತಿ ಅಧಿಕಾರಿಗಳು ಪುರಸಭೆ ಸಿಬ್ಬಂದಿಗಳು ಮತಗಟ್ಟೆಯ ಮತದಾರರು ಉಪಸ್ಥಿತರಿದ್ದರು.