ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಯಾವಾಗಲೂ ಬರ ಆವರಿಸುತ್ತದೆ ಎಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದು ಅದಕ್ಕೆ ವರುಣ ದೇವನೇ ಉತ್ತರ ಕೊಟ್ಟಿದ್ದಾನೆ.
ಇಂದು ಬೆಳಿಗ್ಗೆ ತುಂಬಾ ಜಲಾಶಯಕ್ಕೆ ಆಗಮಿಸಿದ ಸಚಿವ ಮಧು ಬಂಗಾರಪ್ಪ ತುಂಗಾ ಜಲಾಶಯಕ್ಕೆ ಬಾಗಿನವನ್ನು ಅರ್ಪಿಸಿದರು ನಂತರ ನಗರದಲ್ಲಿ ಬಿದ್ದ ಮಳೆಯಿಂದಾಗಿ ನೆರೆ ಪ್ರದೇಶಗಳಿಗೆ ಭೇಟಿ ಆ ಪ್ರದೇಶದ ಸಾರ್ವಜನಿಕರೊಂದಿಗೆ ಮಾತನಾಡಿ ನಂತರ ಸಚಿವರು ಹಾನಿ ಪ್ರಮಾಣದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು
ನಂತರ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಜಲಾಶಯದಿಂದ ಒಳಹರಿವು ಹೆಚ್ಚಾದಲ್ಲಿ ಕೆಲವು ಪ್ರದೇಶಗಳಿಗೆ ನೀರು ನುಗ್ಗಬಹುದು ಸಂತ್ರಸ್ತರಿಗೆ ತುರ್ತು ಸಂದರ್ಭದಲ್ಲಿ ನೆರವಾಗಲು ತತಕ್ಷಣ ತಂಡಗಳನ್ನು ರಚಿಸಿ ಕ್ರಮ ಕೈಗೊಳ್ಳಲು ಮಹಾನಗರ ಪಾಲಿಕೆಗೆ ಸೂಚನೆ ನೀಡಲಾಗಿದೆ ಎಂದರು.
ತುಂಗಾ ನದಿಗೆ ತಡೆಗೋಡೆ ನಿರ್ಮಿಸುವ ಬಗ್ಗೆ ಸಂಬಂಧಪಟ್ಟ ಕ್ರಿಯಾಯೋಜನೆ ಬಗ್ಗೆ ಪ್ರಸ್ತಾವವನ್ನು ರಚಿಸಲು ಪಾಲಿಕೆಗೆ ತಿಳಿಸಲಾಗಿದೆ ಮಹಾನಗರ ಪಾಲಿಕೆ ವತಿಯಿಂದ ಕುರುಬರ ಪಾಳ್ಯದ ಬಳಿ 43, ಲಕ್ಷದ ವೆಚ್ಚದಲ್ಲಿ ಮಣ್ಣು ಕೊಚ್ಚಿ ಹೋಗದಂತೆ 500 ಮೀಟರ್ ಉದ್ದದ ತಡೆಗೋಡೆಯನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಂತ್ ಕುಮಾರ್ ಪಾಲಿಕೆ ಆಯುಕ್ತ ಕವಿತಾ ಯೋಗಪ್ಪನವರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಇತರರು ಉಪಸ್ಥಿತರಿದ್ದರು