ಶಿವಮೊಗ್ಗ: ಜನವರಿ 23: ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2024-25ನೇ ಸಾಲಿನಲ್ಲಿ ಎಸ್.ಸಿ ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಉದ್ಯಮಶೀಲತೆ ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ 06 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 03 ಅಭ್ಯರ್ಥಿಗಳಿಗೆ ವಿದ್ಯಾರ್ಹತೆ 10ನೇ ತರಗತಿ, ವಯಸ್ಸು 20 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಆಯೋಜಿಸಲು ಉದ್ದೇಶಿಸಲಾಗಿರುತ್ತದೆ,
ಈ ತರಬೇತಿಯನ್ನು ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಸಹಾಯಕ ನಿರ್ದೇಶಕರು. ಪ್ರವಾಸೋದ್ಯಮ ಇಲಾಖೆ. ಶಿವಮೊಗ್ಗ ಈ ಕಛೇರಿಯಿಂದ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಲಗತ್ತಿಸಿ ದಿ:31/01/2025 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 08182-251444 ಸಂಪರ್ಕಿಸುವುದು.

Leave a Reply

error: Content is protected !!