ಶಿವಮೊಗ್ಗ, ಮಾರ್ಚ್ 26 : ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಸೀಗೆಹಟ್ಟಿ ಇಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯ ಪ್ರಯುಕ್ತ ಇಂದು ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯುತ್ತಿದ್ದ ವಾರ್ಡ್ ಸಭೆಯ ವೇಳೆಯಲ್ಲಿ ಹಾಜರಿದ್ದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ವೀಪ್ ಸಮಿತಿಯಿಂದ ಚುನಾವಣಾ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಅರ್ಹ ಮತದಾರರು ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಅಂಗನವಾಡಿ ಕ್ಷೇತ್ರದಲ್ಲಿ ಬರುವಂತಹ ಮತದಾರರನ್ನು ಭೇಟಿ ಮಾಡಿ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಮತದಾನ ಮಾಡುವಂತೆ ಅರಿವು ಮೂಡಿಸುಂತೆ ಮನವರಿಕೆ ಮಾಡಲಾಯಿತು.