ಶಿವಮೊಗ್ಗ, ಅಕ್ಟೋಬರ್ 26: : ಕಾರ್ಮಿಕ ಇಲಾಖೆಯು ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ ಜಾರಿಗೆ ತಂದಿದ್ದು, ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಮತ್ತು ಕ್ಲೀನರ್‍ಗಳು ಕಾರ್ಮಿಕ ಅಧಿಕಾರಿಗಳ ಕಚೇರಿ, ಶಿವಮೊಗ್ಗ ಉಪ ವಿಭಾಗ, ಶಿವಮೊಗ್ಗ ಇಲ್ಲಿ ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ತಿಳಿಸಿರುತ್ತಾರೆ.
ಈ ಯೋಜನೆಯು ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ವಯಿಸುತ್ತಿದ್ದು, ವಯೋಮಿತಿ 20 ರಿಂದ 70 ರೊಳಗಿರಬೇಕು. ಯೋಜನೆಯ ಸೌಲಭ್ಯಗಳು ಕರ್ತವ್ಯದಲ್ಲಿರುವಾಗ ಹಾಗೂ ಇಲ್ಲದಿರುವಾಗಲು ಸಹ ಅನ್ವಯಿಸುತ್ತದೆ. ಚಾಲಕರು ಕ.ರಾ.ಸಾ.ಇಲಾಖೆಯಿಂದ ವಾಣಿಜ್ಯ ವಾಹನ ಚಲಾಯಿಸಲು ಊರ್ಜಿ ಚಾಲನಾ ಪರವಾನಿಗೆಯನ್ನು ಹೊಂದಿರುವುದು ಖಡ್ಡಾಯ. ಚಾಲಕರು ಮಂಡಳಿಯಲ್ಲಿ ಯೋಜನೆಯಡಿ ಪ್ರತ್ಯೇಕವಾಗಿ ನೋಂದಣಿ ಮಾಡಿಸುವ ಅವಶ್ಯಕತೆಯಿರುವುದಿಲ್ಲ. ನಿರ್ವಾಹಕರು ಹಾಗೂ ಕ್ಲಿನರ್‍ಗಳು ಮಂಡಳಿಯ ನಿಯಮಾನುಸಾರು ಕಾರ್ಮಿಕ ಇಲಾಖೆಯಲ್ಲಿ ಯೋಜನೆಯಡಿ ಫಲಾನುಭವಿಯಾಗಿ ನೋಂದಣಿ ಮಾಡಿಸಿಕೊಳ್ಳುವುದು.
ಅಪಘಾತದಿಂದ ಚಾಲಕರು ನಿರ್ವಾಹಕರು ಮತ್ತು ಕ್ಲೀನರ್‍ಗಳು ಮರಣ ಹೊಂದಿದ್ದಲ್ಲಿ ಅವರ ನಾಮ ನಿರ್ದೇಶಿತರಿಗೆ ರೂ. 5.00ಲಕ್ಷ ಪರಿಹಾರ, ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಾಗ ಫಲಾನುಭವಿಗೆ ದುರ್ಬಲತೆಯ ಪ್ರಮಾಣಕ್ಕನುಗುಣವಾಗಿ ಗರಿಷ್ಠ ರೂ. 2.00 ಲಕ್ಷ ಹಾಗೂ ತಾತ್ಕಾಲಿಕ ದುರ್ಬಲತೆ ಹೊಂದಿದಾಗ ಅಪಘಾತಕ್ಕೋಳಗಾಗಿ ಅಸ್ಪತ್ರೆಯಲ್ಲಿ 15 ದಿನಗಳಿಗಿಂತ ಕಡಿಮೆ ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ ಗರಿಷ್ಠ ರೂ. 50 ಸಾವಿರಗಳ ವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ ಇವುಗಳಲ್ಲಿ ಯಾವುದು ಕಡಿಮೆಯೋ ಅದನ್ನು ಪಾವತಿಸಲಾಗುವುದು. 15 ದಿನಗಳಿಗಿಂತ ಹೆಚ್ಚು ದಿನ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದಲ್ಲಿ ಗರಿಷ್ಠ ರೂ. 1.00 ಲಕ್ಷದವರೆಗೆ ಅಥವಾ ನಿಖರ ಅಸ್ಪತ್ರೆ ವೆಚ್ಚ ಇವುಗಳಲ್ಲಿ ಯಾವುದು ಕಡಿಮೆಯೋ ಅದನ್ನು ಪಾವತಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಇಲಾಖೆ ಕಚೇರಿ ದೂ.ಸಂ.: 08182-248940 ನ್ನು ಸಂಪರ್ಕಿಸುವುದು.

error: Content is protected !!