ಶಿವಮೊಗ್ಗ, ಆಗಸ್ಟ್ 16 : ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕೊರಮ ಹಾಗೂ ಕೊರಚ ಸಮಾಜ ಇವರುಗಳ ಸಂಯುಕ್ತಾಶ್ರಯದಲ್ಲಿ ಆ.19 ರಂದು ಬೆಳಗ್ಗೆ 11.00ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಶರಣ ಶ್ರೀ ನುಲಿನ ಚಂದಯ್ಯ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವರು ನೆರವೇರಿಸುವರು. ಶಾಸಕರಾದ ಎಸ್.ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಜಿಲ್ಲೆಯ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಜನಪ್ರತಿನಿಧಿಗಳು, ಪಾಲಿಕೆ ಮಹಾಪೌರರು, ವಿವಿಧ ನಿಗಮ/ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಕೊರಮ ಮತ್ತು ಕೊರಚ ಜನಾಂಗದ ಸಮಾಜದಮುಖಂಡರು/ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು ಹಾಗೂ ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
