ಶಿವಮೊಗ್ಗ: ಅತಿರುದ್ರ ಮಹಾಯಾಗ ಸಂಚಾಲನಾ ಸಮಿತಿ ಹಾಗೂ ಭಕ್ತ ವೃಂದದ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಹಾಗೂ ದೇಶದ ನೆಚ್ಚಿನ ಮಹಾನಾಯಕ ಸನ್ಮಾನ್ಯ ನರೇಂದ್ರ ಮೋದಿ ಜೀಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಲೆಂದು ಪ್ರಾರ್ಥಿಸಿ ಇಂದು ಅತಿರುದ್ರ ಮಹಾಯಾಗವನ್ನು ವಿನೋಬನಗರ ಶಿವಾಲಯ ದೇವಸ್ಥಾನದ ಆವರಣದಲ್ಲಿ ಬೆಳಗ್ಗೆ 8.45ಕ್ಕೆ ಆಯೋಜಿಸಲಾಗಿದೆ.
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ , ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ ,
ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ,ಸಂಸದರಾದ ಬಿ.ವೈ.ರಾಘವೇಂದ್ರ, ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ್ರು, ಡಿ.ಎಸ್.ಅರುಣ್, ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಭಾರತಿಶೆಟ್ಟಿ ಭಾಗವಹಿಸುವರು.