ಶಿವಮೊಗ್ಗ, ಡಿಸೆಂಬರ್ 26 : ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ-ಕುಪ್ಪಳಿ ಮತ್ತು ಜಿಲ್ಲಾಡಳಿತ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 29ರಂದು ಬೆಳಿಗ್ಗೆ 10.00ಕ್ಕೆ ಕುಪ್ಪಳಿಯ ಹೇಮಾಂಗಣದಲ್ಲಿ ಕುವೆಂಪು ಅವರ 119ನೇ ಜನ್ಮದಿನೋತ್ಸವ, ಕುವೆಂಪು ರಾಷ್ಟ್ರೀಯ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಸಾಂಸ್ಕøತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಅಂದು ಬೆಳಿಗ್ಗೆ 10.00ಕ್ಕೆ ಅತಿಥಿಗಳಿಂದ ಕವಿಶೈಲದಲ್ಲಿ ಕವಿನಮನ, ಬೆ. 11 ರಿಂದ ಮಾಜಿ ಗೃಹಸಚಿವ, ಶಾಸಕ ಆರಗ ಜ್ಞಾನೇಂದ್ರರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಲಿರುವರು. ಕಾರ್ಯಕ್ರಮದಲ್ಲಿ 2023ನೇ ಸಾಲಿನ ಕುವೆಂಪು ಪ್ರಶಸ್ತಿ ಪುರಸ್ಕøತ ಖ್ಯಾತ ಬಂಗಾಳಿ ಸಾಹಿತಿ ಶ್ರೀ ಶೀರ್ಷೇಂಧು ಮುಖ್ಯೋಪಾಧ್ಯಾಯರವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಡಾ. ಬಿ.ಎಲ್.ಶಂಕರ್ರವರು ಪ್ರಧಾನ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸ್ಥಾಪಕ ನಿರ್ದೇಶಕರು ಮತ್ತು ಪ್ರೋಫೆಸರ್, ನೆಫ್ರೋ ಯುರೋಲಜಿ ಸಂಸ್ಥೆಯ ಡಾ. ಜಿ.ಕೆ. ವೆಂಕಟೇಶ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ. ಸುಧಾಕರ್ ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರುಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿರುವರು.
ಅಂದು ಸಂಜೆ 7.00ಕ್ಕೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಶಿವಮೊಗ್ಗದ ನಮ್ ಟೀಮ್ ತಂಡದವರಿಂದ ವಾಲ್ಮೀಕಿಯ ಭಾಗ್ಯ ನಾಟಕ ಏರ್ಪಡಿಸಲಾಗಿದೆ.
ಇದೇ ಸಮಾರಂಭದಲ್ಲಿBeginner’s Muse & Alien Harp ಕುವೆಂಪುರವರ ಮೊದಲ ಪುಸ್ತಕ ಹಾಗೂ ಶೀರ್ಷೇಂಧು ಮುಖ್ಯೋಪಾಧ್ಯಾಯರವರ ಸಾಮೀಪ್ಯ (ಬಂಗಾಳಿ) ಪುಸ್ತಕ ಬಿಡುಗಡೆಯಾಗಲಿದೆ.
ಡಿಸೆಂಬರ್ 29, 2023 ರಿಂದ ಜನವರಿ 01, 2024 ರವರೆಗೆ ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಕೇಂದ್ರ, ಕುಪ್ಪಳಿ, ಇವರ ಸಹಯೋಗದೊಂದಿಗೆ ಕುವೆಂಪು ಅವರ ವಿಚಾರ ಸಾಹಿತ್ಯ ಕುರಿತ ರಾಷ್ಟ್ರಮಟ್ಟದ ಕಾರ್ಯಾಗಾರ ನಡೆಯಲಿದೆ. ಡಾ|| ಬಿ.ಎಂ. ಪುಟ್ಟಯ್ಯ ಈ ಶಿಬಿರದ ನಿರ್ದೇಶಕರು.