ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ. ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಮಂಗನ ಕಾಯಿಲೆಗೆ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಚಿಕಿತ್ಸೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಅಲ್ಲದೇ ಕೆ.ಎಫ್.ಡಿ ಪಾಸಿಟಿವ್ ಬಂದವರನ್ನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

error: Content is protected !!