ಶಿವಮೊಗ್ಗ, ಜುಲೈ 20 ಶಿಕಾರಿಪುರ ತಾಲ್ಲೂಕಿನಲ್ಲಿ ಅಧಿಕ ಮಳೆಯಾಗುತ್ತಿದ್ದು, ಅಡಿಕೆಯಲ್ಲಿ ಕಾಯಿ ಉದುರುವುದು ಹೆಚ್ಚಾಗಿ ಕಂಡುಬರುತ್ತಿದೆ. ಹಾಗೂ ಕೊಳೆರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತಿರುವುದರಿಂದ ರೈತರು ಈ ಕೆಳಕಂಡ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಶೇ.1 ರ ಬೋರ್ಡೋ ದ್ರಾವಣವನ್ನು ಅಥವಾ ಕಾಪರ್ ಆಕ್ಸಿ ಕ್ಲೋರೈಡ್(ಸಿಒಸಿ)ನ್ನು 3 ಗ್ರಾಂ ಪ್ರತಿ ಲೀಟರ್‍ಗೆ ಬೆರೆಸಿ ಅಡಕೆಗೆ ಸಿಂಪಡಣೆ ಮಾಡಲು ತಿಳಿಸಿದೆ. ಮುಂದುವರೆದು ಅಡಿಕೆಕಾಯಿ ರಸ ಹೀರುವ ತಿಗಣೆ ನಿಯಂತ್ರಣಕ್ಕೆ ಪ್ರತಿ ಲೀಟರ್ ನೀರಿಗೆ ಕ್ಲೊರೋಪೈರೋಪಾಸ್ 2 ಮಿ.ಲೀ ಅಥವಾ ಮೊನೋಕ್ರೊಟೋಫಾಸ್ 1.5 ಮಿ.ಲೀ ನ್ನು ಗೊನೆಗಳಿಗೆ ಸಿಂಪಡಣೆ ಮಾಡಬೇಕು. ಬೋರ್ಡೋ ದ್ರಾವಣ ತಯಾರಿಸುವ ವಿಧಾನ ತಿಳಿಯಲು ಹತ್ತಿರದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಅಥವಾ ಶಿಕಾರಿಪುರದ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದೆಂದು ಅವರು ತಿಳಿಸಿದ್ದಾರೆ.

error: Content is protected !!