ಶಿವಮೊಗ್ಗ, ಫೆಬ್ರವರಿ 08 : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದಿಂದ ಹಿಂದುಳಿದ ಪ್ರವರ್ಗ-2ಎ ರಲ್ಲಿನ ಮಡಿವಾಳ ಮತ್ತು ಇದರ ಉಪಜಾತಿಗೆ ಸೇರಿದ ಖುಷ್ಕಿ ಜಮೀನಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ ಸೌಲಭ್ಯ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 03 ಕಡೆಯ ದಿನವಾಗಿದೆ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ.98,000 ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1,20,000/- ಇದ್ದು, ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ನಿಗಮದ ವೆಬ್ಸೈಟ್ https://kmmd.karnataka.gov.in
ಅಥವಾ ದೂರವಾಣಿ/ಸಹಾಯವಾಣಿ ಸಂಖ್ಯೆ 080-22374832, 8050773004/5, 8050370006, 7090400100, 7090400900 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಭಾಗ್ಯ ನಿಲಯ, 1ನೇ ತಿರುವು ಗಾಂಧಿನಗರ ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದೆಂದು ನಿಗದದ ವ್ಯವಸ್ಥಾಪಕರು ತಿಳಿಸಿದ್ದಾರೆ.