ಶಿವಮೊಗ್ಗ, ಆಗಸ್ಟ್ 06 : ಡಾ|| ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ಜಿಲ್ಲೆಯಲ್ಲಿ ಕೋವಿಡ್ 19ರ 2ನೇ ಅಲೆಯ ಪರಿಹಾರವಾಗಿ ರೂ. 2,000/- ಗಳ ಪರಿಹಾರ ಪಡೆಯಲು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆಗಸ್ಟ್-21ರವರೆಗೆ ವಿಸ್ತರಿಸಲಾಗಿದೆ ಎಂದು ನಿಗಮದ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಚರ್ಮ ಹದ ಮಾಡುವ ವೃತ್ತಿಯಲ್ಲಿ ತೊಡಗಿರುವವರು ನಗರಸಭೆ, ಪುರಸಭೆ, ಪಿ.ಡಿ.ಓಗಳಿಂದ ವೃತ್ತಿ ಪ್ರಮಾಣ ಪತ್ರದೊಂದಿಗೆ ಎಲ್ಲಾ ದಾಖಲೆಗಳೊಂದಿಗೆ ಸೇವಾ ಸಿಂಧು ಅನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಲಿಡ್ಕರ್- 9480886268 ನ್ನು ಸಂಪರ್ಕಿಸುವುದು.