ಶಿವಮೊಗ್ಗ, ಜುಲೈ 20 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್-ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2020-21ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ”, ಮತ್ತು “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಶ್ಯವೇತನ” ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 25ರವರೆಗೆ ವಿಸ್ತರಿಸಿದೆ.
ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಘೋಷಣೆಯಾದ ಕಾರಣ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿರುವುದರಿಂದ ವಿದ್ಯಾರ್ಥಿಗಳು ಈ ಅಟೇಷ್ಟೇಷನ್ ಮಾಡಿಸುವುದು ಕಷ್ಟವಾಗಿರುತ್ತದೆ. ಈಗಾಗಲೇ ಎಸ್.ಎಸ್.ಪಿ ಪೋರ್ಟಲ್ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯನ್ನು ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುವಂತೆ ದಿನಾಂಕ: 25-07-2021ರವರೆಗೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಹೊಸದಾಗಿ ಅರ್ಜಿ ಹಾಕುವವರಿಗೆ ಅವಕಾಶವಿರುವುದಿಲ್ಲ. ಅರ್ಜಿ ಸಲ್ಲಿಸುವವರು ತಿತಿತಿ.ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯ ವಾಣಿ- 8050770005/8050770004 ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ- 080-35254757 ಗೆ ಕರೆಮಾಡಬಹುದು ಎಂದು ಬೆಂಗಳೂರಿನ ಹಿಂದುಳಿದ ವರ್ಗಗಳ ಕಲ್ಯಾಣಾ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.