45 ವರ್ಷ ಮೇಲ್ಪಟ್ಟ ಎಲ್ಲ ನಾಗರೀಕರಿಗೂ ಕೊರೊನಾ ಲಸಿಕೆ ಲಭ್ಯವಿದ್ದು, ದಯವಿಟ್ಟು ಅರ್ಹ ವ್ಯಕ್ತಿಗಳು ಸ್ವಯಂಪ್ರೇರಿತವಾಗಿ ಲಸಿಕೆಯನ್ನು ಪಡೆಯಬೇಕೆಂದು ವಿನಂತಿಸಿಕೊಂಡರು.ನಮ್ಮ ದೇಶದ ಎಲ್ಲ ಪ್ರಜೆಗಳಿಗೆ ಲಸಿಕೆಯನ್ನು ಕೊಡುವುದಲ್ಲದೆ ಜಗತ್ತಿನ ಅನೇಕ ರಾಷ್ಟ್ರಗಳಿಗೆ ಉಚಿತವಾಗಿ ಲಸಿಕೆಯನ್ನು ಪೂರೈಕೆ ಮಾಡುತ್ತಿರುವ ಭಾರತದ ಪ್ರಧಾನಿ ಮೋದಿಯವರ ಮಾನವೀಯ ದೃಷ್ಟಿಯನ್ನು ಶ್ಲಾಘಿಸಿದರು.

ವಿಶ್ವದಲ್ಲೆಡೆ ತಲ್ಲಣ ಸೃಷ್ಟಿಸಿದ ಮಹಾಮಾರಿ  ಕೊರೊನಾ ಪಿಡುಗನ್ನು ಹೋಗಲಾಡಿಸಲು ಲಸಿಕೆ ಪಡೆಯುವುದೇ ಏಕೈಕ ಮಾರ್ಗವಾಗಿದ್ದು, ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ ಎಂದು ತಿಳಿಸಿದರು.ಲಸಿಕೆ ಪಡೆಯಲು ಯಾರೂ ಭಯಪಡಬೇಕಾಗಿಲ್ಲ. ಸಾರ್ವಜನಿಕರು ಯಾವುದೇ ಭಯವಿಲ್ಲದೆ ವ್ಯಾಕ್ಸಿನ್ ಹಾಕಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ ಎಂದು ಹೇಳಿದರು.ಈ ಸಂದರ್ಭದಲ್ಲಿ  ಜಿಲ್ಲಾ  ಮೆಗ್ಗಾನ್ ಅಧಿಕ್ಷಕರಾದ ಡಾ.ಶ್ರೀ ಧರ್  ಮತ್ತು ಡಾ.ನಾಗರಾಜ್  ಉಪಸ್ಥಿತರಿದ್ದರು

error: Content is protected !!