ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹ ಪ್ರಾಧ್ಯಾಪಕ ಡಾ. ಸತ್ಯಪ್ರಕಾಶ್ ಎಂ. ಆರ್ ಅವರ ಮಾರ್ಗದರ್ಶನದಲ್ಲಿ ಎ. ಜೆ. ಗೀತಾ ಅವರು “ಇನ್ಸ್ಟಿಟ್ಯೂಷನಲ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಆ್ಯಸ್ ಎ ಪಿಆರ್ ಟೂಲ್: ಎ ಸ್ಟಡಿ ಆಫ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” ಎಂಬ ವಿಷಯದ ಬಗ್ಗೆ ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿಎಚ್.ಡಿ.) ಪದವಿ ನೀಡಿದೆ. ಎ. ಜೆ. ಗೀತಾ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವರಾಗಿದ್ದು, ಪ್ರಸ್ತುತ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

error: Content is protected !!