News Next

ಶಿವಮೊಗ್ಗ, ಸೆ.16 : ಕಂದಾಯ ಇಲಾಖೆಯ ವಿವಿಧ ಕಡತಗಳ ಶೀಘ್ರ ವಿಲೇವಾರಿ ರ‍್ಯಾಂಕಿಂಗ್ ನಲ್ಲಿ ಆಗಸ್ಟ್ ತಿಂಗಳಿನಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದೆ.

ಭೂ ಪರಿವರ್ತನೆ ಅರ್ಜಿಗಳ ವಿಲೇವಾರಿ, ಉಪ ವಿಭಾಗದ ಆಯುಕ್ತರ ನ್ಯಾಯಾಲಯದ ಪ್ರಕರಣಗಳ ವಿಲೇವಾರಿ, ಜಿಲ್ಲಾಧಿಕಾರಿ ನ್ಯಾಯಾಲಯದ ಪ್ರಕರಣಗಳ ವಿಲೇವಾರಿ, ಪಹಣಿ ತಿದ್ದುಪಡಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕಡತಗಳ ವಿಲೇವಾರಿಯನ್ನು ಪರಿಗಣಿಸಿ ಪ್ರತಿ ತಿಂಗಳು ರಾಜ್ಯಮಟ್ಟದಲ್ಲಿ ರ‍್ಯಾಂಕಿAಗ್ ನೀಡಲಾಗುತ್ತದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವೀಕರಿಸುವ ಎಲ್ಲಾ ಅರ್ಜಿಗಳನ್ನು ಕಾಲಮಿತಿಯ ಒಳಗಾಗಿ ವಿಲೇವಾರಿ ಮಾಡಲು ಎಲ್ಲಾ ಶಾಖಾ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದ್ದು, ಎಲ್ಲರ ಸಹಕಾರದಿಂದ ತ್ವರಿತವಾಗಿ ಕಡತಗಳ ವಿಲೇವಾರಿ ಸಾಧ್ಯವಾಗಿದೆ. ಕಚೇರಿಗೆ ಆಗಮಿಸುವ ಸಾರ್ವಜನಿಕರನ್ನು ಅಲೆದಾಡಿಸದೆ ಆದಷ್ಟು ಬೇಗನೆ ಕೆಲಸ ಕಾರ್ಯವನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಕಂದಾಯ ವಿಷಯಗಳಲ್ಲಿ ಶಿವಮೊಗ್ಗ ಜಿಲ್ಲೆ ಉತ್ತಮ ಸಾಧನೆ ಮಾಡಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿಕೊಂಡಿದೆ. ಭೂ ಪರಿವರ್ತನೆ ಪ್ರಕರಣಗಳು, ಉಪ ವಿಭಾಗ ಮತ್ತು ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯದ ಪ್ರಕರಣಗಳ ವಿಲೇವಾರಿಯಲ್ಲಿ ಗಣನೀಯ ಪ್ರಗತಿ ಸಾಧಿಸಲಾಗಿದೆ. ರೈತರಿಗೆ ಸಹಾಯಕವಾಗುವ ನಿಟ್ಟಿನಲ್ಲಿ ಪಹಣಿ ಪತ್ರಿಕೆಯ ಕಲಂ 3 ಮತ್ತು 9ರಲ್ಲಿನ ನ್ಯೂನತೆಗಳನ್ನು ಕಾಲಮಿತಿಯಲ್ಲಿ ತಿದ್ದುಪಡಿ ಮಾಡುವುದು ಸೇರಿದಂತೆ ಕಂದಾಯಕ್ಕೆ ಸಂಬAಧಿಸಿದ ವಿಷಯಗಳಲ್ಲಿ ಉತ್ತಮ ಸಾಧನೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ತಿಳಿಸಿದ್ದಾರೆ.

ಪ್ರಸ್ತುತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಶತ ಇ-ಆಫೀಸ್ ವ್ಯವಸ್ಥೆಯನ್ನು ಅನುಷ್ಟಾನಗೊಳಿಸಲಾಗಿದೆ. ಸ್ವೀಕರಿಸಲಾಗುವ ಪ್ರತಿಯೊಂದು ಅರ್ಜಿಯನ್ನು ಅದೇ ದಿನ ಡಿಜಟಲೀಕರಣಗೊಳಿಸಿ ಕಡತವನ್ನು ಸೃಷ್ಟಿಸಲಾಗುತ್ತಿದೆ. ಇದು ಸಂಪೂರ್ಣ ಪಾರದರ್ಶಕ ವ್ಯವಸ್ಥೆಯಾಗಿದ್ದು, ಕಡತಗಳ ವಿಲೇವಾರಿ ಸುಗಮವಾಗಲು ಸಾಧ್ಯವಾಗಿದೆ. ಸಾರ್ವಜನಿಕರ ಅರ್ಜಿಗಳ ತ್ವರಿತವಾಗಿ ವಿಲೇವಾರಿ ಮಾಡಲು ಇ-ಆಫೀಸ್ ವ್ಯವಸ್ಥೆ ಪೂರಕವಾಗಿದೆ ಎಂದು ಅವರು ಹೇಳಿದ್ದಾರೆ.

ಉಪವಿಭಾಗೀಯ ಆಯುಕ್ತರ ಕಚೇರಿ ಮತ್ತು ತಹಶೀಲ್ದಾರ್ ಕಚೇರಿಯಲ್ಲಿ ಸಹ ಇ-ಆಫೀಸ್ ವ್ಯವಸ್ಥೆಯನ್ನು ಹಂತ ಹಂತವಾಗಿ ಅನುಷ್ಟಾನಗೊಳಿಸಲಾಗುತ್ತಿದೆ. ಮುಂದಿನ ಹಂತದಲ್ಲಿ ಇಡೀ ಕಂದಾಯ ಇಲಾಖೆಯನ್ನು ಇ-ಆಫೀಸ್ ಮೂಲಕ ಪರಸ್ಪರ ಜೋಡಿಸಲಾಗುವುದು. ಇದರಿಂದ ಸಾರ್ವಜನಿಕರು ಕಚೇರಿಗಳಿಗೆ ಓಡಾಡುವುದು ತಪ್ಪಲಿದೆ ಎಂದು ಅವರು ಹೇಳಿದ್ದಾರೆ.

ಸಾಮಾಜಿಕ ಭದ್ರತಾ ಯೋಜನೆಗಳ ಅನುಷ್ಟಾನ, ಗ್ರಾಮ ಪಮಚಾಯತ್ ಮಟ್ಟದಲ್ಲಿ ಘನತ್ಯಾಜ್ಯ ವಸ್ತುಗಳ ವಿಲೇವಾರಿ ಘಟಕ ಸ್ಥಾಪನೆಗೆ ಭೂಮಿ ಗುರುತಿಸುವ ಪ್ರಕ್ರಿಯೆ, ಸ್ಮಶಾನಗಳಿಗೆ ಭೂಮಿಯನ್ನು ಗುರುತಿಸುವ ಪ್ರಕ್ರಿಯೆಯನ್ನು ಸಹ ಚುರುಕುಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಇನ್ನಷ್ಟು ತ್ವರಿತಗತಿಯಲ್ಲಿ ಸೇವೆಯನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

error: Content is protected !!